ಬಂಟ್ವಾಳ: ಬಂಟ್ವಾಳ ತಾಲೂಕು ಅರಳ ಗ್ರಾಮದ ಎರ್ಮಾಳಪದವು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಲ್ಲಿ ೧೩ ವರ್ಷಗಳ ಕಾಲ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಫ್ಲೋರಿನ್ ಹಿಲ್ಡಾ ಕರ್ವಾಲ್ಲೊ ಅವರಿಗೆ ಬೀಳ್ಕೊಡುಗೆ ಮತ್ತು ಸಮ್ಮಾನ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಅರಳ ಗ್ರಾ.ಪಂ. ಅಧ್ಯಕ್ಷೆ ತುಂಗಮ್ಮ, ಉಪಾಧ್ಯಕ್ಷ ಜಗದೀಶ್ ಆಳ್ವ ಅಗ್ಗೊಂಡೆ, ಸದಸ್ಯರಾದ ಅಶ್ರಫ್ , ಕಲ್ಯಾಣಿ, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಕುಮಾರ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಮಹಾಸ್ವಾಮಿ ಸ್ವಾಗತಿಸಿದರು., ಸಹ ಶಿಕ್ಷಕಿ ಶಾಂತಿ ವಂದಿಸಿದರು. ಸಹ ಶಿಕ್ಷಕಿ ಶಾಲಿನಿ ಡಿಸೋಜ ಕಾರ್ಯಕ್ರಮ ನಿರೂಪಣೆ ಮಾಡಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here