Wednesday, April 17, 2024

14ರ ವಯೋಮಾನದ ಬಾಲಕಿಯರ ಕರಾಟೆ ಪಂದ್ಯದಲ್ಲಿ ಪ್ರಥಮ ಸ್ಥಾನ

ಬಂಟ್ವಾಳ:  ಪಲ್ಲವಿ. ವಿ ಇವರು ತಾ:21 ರಂದು ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆಯ ಬಂಟ್ವಾಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ 14ರ ವಯೋಮಾನದ ಬಾಲಕಿಯರ ಕರಾಟೆ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರು ಎಸ್. ವಿ. ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯಾಗಿರುತ್ತಾರೆ. ಇವರು ಮಣಿಹಳ್ಳದ ವಸಂತ ಕುಮಾರ್. ವಿ ಹಾಗೂ ಮೀನಾಕ್ಷಿ. ವಿ ದಂಪತಿಯ ಮಗಳಾಗಿರುತ್ತಾಳೆ. ಇವರು ಕಾನ್. ರಿಯು. ಆರ್. ವಿ. ಟೈಗರ್ಸ ಮರ್ಶಿಯಲ್ ಆರ್ಟ್ಸ್ ಕರ್ನಾಟಕ ತಂಡದ ವಿದ್ಯಾರ್ಥಿನಿ.
ಇವರು ಶಿಹಾನ್ ವಸಂತ್ ಕೆ ಬಂಗೇರ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...