ಬಂಟ್ವಾಳ: ಬಿಜೆಪಿಯ ರಾಜ್ಯದ ಚುಕ್ಕಾಣಿ ಹಿಡಿದ ದ.ಕ.ಸಂಸದ ನಳಿನ್ ಕುಮಾರ್ ಕಟೀಲು.
ಬಿಜೆಪಿ ರಾಜ್ಯಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಅವರು ಆಯ್ಕೆಯಾಗಿದ್ದಾರೆ ಎಂದು ಪಕ್ಷ ಘೋಷಣೆ ಮಾಡಿದೆ.


ಮುಂದಿನ ಮೂರು ವರ್ಷಗಳ ಅವಧಿಗೆ ರಾಜ್ಯಧ್ಯಕ್ಷರಾಗಿ ನಳಿನ್ ಅವರ ನೇಮಕವಾಗಿದ್ದು ಜಿಲ್ಲೆಯ ಜನತೆಗೆ ಖುಷಿಯ ವಿಚಾರ.
ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಯಾಗಿ ಉಡುಪಿ ಮೂಲದ ಸಂತೋಷ್ ಜಿ.ಯವರು ನೇಮಕವಾದ ಬೆನ್ನಲ್ಲೇ ರಾಜ್ಯದ ಪ್ರಮುಖ ಹುದ್ದೆ ಯಾದ ರಾಜ್ಯಧ್ಯಕ್ಷ ಹುದ್ದೆ ಜಿಲ್ಲೆಗೆ ದೊರಕಿರುವುದು ಜಿಲ್ಲೆಯ ಜನತೆಗೆ ಸಂತೋಷ ದಾಯಕವಾದ ವಿಚಾರ.
ಸತತವಾಗಿ ಮೂರು ಬಾರಿ ಸಂಸದರಾಗಿ ಜಿಲ್ಲೆಯ ಅಭಿವೃದ್ಧಿ ಯ ರೂವಾರಿಯಾಗಿ ಪಕ್ಷದ ಸಂಘಟನೆ ಪ್ರಮುಖವಾದ ಪಾತ್ರವಹಿಸಿ ಹೈಕಮಾಂಡ್ ನ ಬಳಗದಲ್ಲಿ ಗುರುತಿಸಿ ಕೊಂಡಿದ್ದ ನಳಿನ್ ಅವರು ರಾಜ್ಯಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಇವರ ಅವಧಿಯಲ್ಲಿ ಪಕ್ಷ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಲಯುತವಾಗಿ ಸಂಘಟಿತ ವಾಗಲಿ ಎಂದು ಜಿಲ್ಲೆಯ ಜನರ ಪರವಾಗಿ ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ರಾಜ್ಯಧ್ಯಕ್ಷರಾಗಿ ಆಯ್ಕೆಯಾದ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಸುಳ್ಯ ತಾಲೂಕಿನ ಪೆರುವಾಜೆಯ ಮುಕ್ಕೂರು ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪುತ್ತೂರಿನ ಸೈಂಟ್‌ ಫಿಲೋಮಿನಾ ಹೈಸ್ಕೂಲ್‌ ನಲ್ಲಿ ಪ್ರೌಢ ಶಿಕ್ಷಣ ಪಡೆದ ನಳಿನ್‌ ಆ ಕಾಲದಲ್ಲಿಯೇ ರಾಷ್ಟ್ರೀಯ ಸ್ವಯಂಸೇವಕ ಸಂಘದತ್ತ ಆಕರ್ಷಿತರಾಗಿ ತಮ್ಮ 18ನೇ ವಯಸ್ಸಿನಲ್ಲೇ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿದ್ದರು. ಹೀಗೆ 12 ವರ್ಷಗಳ ಕಾಲ ಆರ್‌.ಎಸ್‌.ಎಸ್‌. ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದರು.
2004ರಲ್ಲಿ ಜಿಲ್ಲಾ ಬಿಜೆಪಿಯ ಸಂಘಟನ ಕಾರ್ಯದರ್ಶಿಯಾಗಿ ಆಯ್ಕೆಯಾದ ನಳಿನ್ ಕುಮಾರ್ ಅವರು 2009ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿಗೆ ಸಂಸತ್ತು ಪ್ರವೇಶಿಸಿದ್ದರು. 2014ರಲ್ಲಿ ಪುನರಾಯ್ಕೆಯಾದರು. ಮತ್ತೆ 2019ರಲ್ಲಿ ಮೂರನೇ ಬಾರಿಗೆ ಸತತವಾಗಿ ಹ್ಯಾಟ್ರಿಕ್ ಹೊಡೆದಿದ್ದಾರೆ

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here