Friday, April 12, 2024

ಅಧಿಕಾರಿಗಳು ಅಲರ್ಟ್ ಇರಬೇಕು: ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ: ಜಿಲ್ಲೆಯಾದ್ಯಂತ ಬಾರೀ ಮಳೆಯಾಗುತ್ತಿರುವುದರಿಂದ ನೇತ್ರಾವತಿ ನದಿಯ ನೀರಿನ ಮಟ್ಟ ಏರಿಕಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಎಲ್ಲಾ ಅಧಿಕಾರಿಗಳು ಹೈ ಅಲರ್ಟ್ ಅಗಿರುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತಿಳಿಸಿದ್ದಾರೆ.


ಅವರು ಬಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೆರೆ ಬೀತಿಯಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
24 ಗಂಟೆಯೂ ಅಧಿಕಾರಿಗಳು ಸಂಪರ್ಕಕ್ಕೆ ಸಿಗುವಂತೆ ತಿಳಿಸಿದ್ದಾರೆ.
ವೀಕ್ಷಣೆ: ಸೋಮವಾರ ರಾತ್ರಿಯಿಂದ ದಿನವಿಡೀ ಸುರಿಯಿತ್ತಿರುವ ಮಳೆಯಿಂದ ಬಂಟ್ವಾಳ ತಾಲೂಕಿನ ಕೆಲ ತಗ್ಗು ಪ್ರದೇಶಗಳಿಗೆ ಹಾಗೂ ಎ.ಎಂ.ಆರ್ ಡ್ಯಾಂ ಹಾಗೂ ಇನ್ನಿತರ ಅಪಾಯದ ಪ್ರದೇಶಗಳಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್.ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ ಬೇಟಿ ನೀಡಿದ್ದಾರೆ

ಬೆಳಿಗ್ಗೆ 7.7 ಮೀಟರ್ ಇದ್ದ ನೀರಿನ ಮಟ್ಟ ಸಂಜೆಯ ವೇಳೆ 7.9 ಮೀಟರ್ ಏರಿಕೆ ಯಾಗಿದೆ. ನೇತ್ರಾವತಿ ನದಿಯ ನೀರಿನ ಅಪಾಯದ ಮಟ್ಟ 8.5 ಅಗಿದ್ದು ಒಂದು ವೇಳೆ ರಾತ್ರಿಯ ವೇಳೆ ಘಟ್ಟ ಪ್ರದೇಶದಲ್ಲಿ ಮಳೆ ಜೊತೆ ಗಾಳಿಯೂ ಜಾಸ್ತಿಯಾಗಿ ಬಂದರೆ ನಾಳೆ ಮತ್ತಷ್ಟು ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಗಳಿವೆ.
ಪಾಣೆಮಂಗಳೂರು ಆಲಡ್ಕ ಪ್ರದೇಶದ ಕೆಲವು ತಗ್ಗು ಪ್ರದೇಶದ ಮನೆಗಳಿಗೆ ಈಗಾಗಲೇ ನೀರು ನುಗ್ಗಿದೆ.

ತಗ್ಗು ಪ್ರದೇಶದ ಮನೆಗಳು ಶಿಪ್ಟ್: ಪಾಣೆಮಂಗಳೂರು ಮಿಲಿಟರಿ ಗ್ರೌಂಡ್ ನ ಲ್ಲಿರುವ ಸುಮಾರು 17 ಮನೆಗಳನ್ನು ಹಾಗೂ ಇನ್ನಿತರ ಕಡೆ ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳನ್ನು ನೆರೆಯ ಬೀತಿಯಿಂದ ಸ್ಥಳಾಂತರ ಮಾಡಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್. ಮಾಧ್ಯಮ ವರಿಗೆ ತಿಳಿಸಿದ್ದಾರೆ.
ಜೊತೆಗೆ ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ಪ್ರವಾಸಿ ಮಂದಿರ ಹಾಗೂ ಪಾಣೆಮಂಗಳೂರು ಶಾಲೆಯನ್ನು ಗಂಜಿ ಕೇಂದ್ರ ವಾಗಿ ಗುರುತಿಸಿಡಲಾಗಿದೆ ಎಂದು ತಿಳಿಸಿದ್ದಾರೆ.

More from the blog

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...