Thursday, April 18, 2024

ಪೆರ್ನೆ: ವನಮಹೋತ್ಸವ

ವಿಟ್ಲ: ಕರ್ನಾಟಕ ಅರಣ್ಯ ಇಲಾಖೆ ಬಂಟ್ವಾಳ ವಲಯ ಮತ್ತು ಪೆರ್ನೆ ಶ್ರೀರಾಮಚಂದ್ರ ಪದವಿ ಪೂರ್ವ ವಿದ್ಯಾಲಯ ಹಾಗು ಧರ್ಮಸ್ಥಳ ಗ್ರಾಮಾಭಿವೃದಿ ಯೋಜನೆ, ಪೆರ್ನೆ, ಬಿಳಿಯೂರು ಒಕ್ಕೂಟಗಳ ಸಹಯೋಗದಲ್ಲಿ ರೋಟರಿ ಇಂಟರ್‍ಯಾಕ್ಟ್ ಕ್ಲಬ್, ಇಕೋ ಕ್ಲಬ್, ಅಯೋಧ್ಯ ಫ್ರೆಂಡ್ ಕ್ಲಬ್‌ಗಳ ಸಹಕಾರದೊಂದಿಗೆ ಪೆರ್ನೆ ಶ್ರೀರಾಮಚಂದ್ರ ಪದವಿ ಪೂರ್ವ ವಿದ್ಯಾಲಯದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಲಯ ಅರಣ್ಯಾಧಿಕಾರಿ ಯಶೋಧರ ಮಾತನಾಡಿ ವನಮಹೋತ್ಸವ, ಪರಿಸರ, ಗಿಡಮರಗಳೇ ನದಿ ನೀರಿನ ಮೂಲ. ಗಿಡಮರಗಳನ್ನು ನೆಟ್ಟು ಬೆಳೆಸಬೇಕು ಎಂದು ತಿಳಿಸಿದರು. ಕಾಲೇಜು ಪ್ರಿನ್ಸಿಪಾಲ್ ಶೇಖರ್ ರೈ ಪ್ರಾಸ್ತಾವಿಕವಾಗಿ ಮಾತನಾಡಿ ಸಂಘಗಳು ಚಲನಶೀಲವಾದರೆ ಸಂಗಡಿಗರು ಕ್ರಿಯಾಶೀಲರಾಗುತ್ತಾರೆ. ಸಾರ್ವಜನಿಕ ಸ್ಥಳ, ಸಂಸ್ಥೆಗಳಲ್ಲಿ ಗಿಡಗಳನ್ನು ನೆಟ್ಟರೆ ಅದರಲ್ಲಿ ಸಿಗುವ ನೆಮ್ಮದಿ ಬೇರೆಲ್ಲೂ ಸಿಗದು ಎಂದರು.
ಅರಣ್ಯಾಧಿಕಾರಿ ಜಿತೇಶ್ ಭಾಗವಹಿಸಿದ್ದರು. ಧರ್ಮಸ್ಥಳ ಗಾಮೀಣ ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಶ್ರೀಮತಿ ಜಯಶ್ರೀ ಸ್ವಾಗತಿಸಿದರು. ಯೋಜನೆ ಸದಸ್ಯ ಪುರುಶೋಥಮ ವಂದಿಸಿದರು. ಮುಖ್ಯಗುರು ಶಿವರಾಮ ಭಟ್ ಕಾರ್ಯಕ್ರಮ ನಿರೂಪಿಸಿದರು. ಸಂಪನ್ಮೂಲ ವ್ಯಕ್ತಿ ಶ್ರೀ ದೇವಿಕ್ ಭಾಗವಹಿಸಿ ಹಾವುಗಳ ಬಗ್ಗೆ ಮಾಹಿತಿ ನೀಡಿದರು.
ಇಂದಿರಾ ಪ್ರಾರ್ಥನೆ ಹಾಡಿದರು. ಅಯೋಧ್ಯಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರು ಉಪಸ್ಥಿತರಿದ್ದರು. ಇಕೋ ಕ್ಲಬ್ ಸಂಚಾಲಕರಾದ ಅನಿಲ್ ಕುಮಾರ್ ಮತ್ತು ಚಂದ್ರಹಾಸ ರೈ ಸಂಯೋಜಿಸಿದರು. 250 ವಿದ್ಯಾರ್ಥಿಗಳು ವನಮಹೋತ್ಸವದಲ್ಲಿ ಭಾಗವಹಿಸಿದರು.

 

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...