ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು, ಬಂಟ್ವಾಳ ಇಲ್ಲಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಶಿ ಎ ಚೌಟ ಇವರು ಮಂಗಳೂರು ಭಾರತೀ ಕಾಲೇಜು ಆ.21ರಂದು ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿರುವ ’ಕನ್ನಡವೇ ಸತ್ಯ- ಕನ್ನಡವೇ ನಿತ್ಯ’ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿ-2019ರಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.

               

ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಲಿಖಿತಾ ಎನ್. ಮತ್ತು ವೈಶಾಕ್ ಇವರು ಸಮಾಧಾನಕರ ಬಹುಮಾನವನ್ನು ಗಳಿಸಿರುತ್ತಾರೆ.
ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗ ಹಾಗೂ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಗಳು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here