Friday, April 12, 2024

3 ಅಶಕ್ತರಿಗೆ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನಿಂದ ಧನ ಸಹಾಯ ಹಸ್ತಾಂತರ

ನರದ ಸಮಸ್ಯೆಯಿಂದ ಒಂದು ಕಾಲಿನ ಮತ್ತು ಕೈಯ ಸ್ವಾಧೀನ ಕಳೆದುಕೊಂಡಿರುವ *ಮಂಗಳೂರು ತಾಲೂಕಿನ ಮುತ್ತೂರು ಗ್ರಾಮದ ಕೊಳವೂರು ಸಮೀಪದ ತಾರೆಮಾರ್ ಕಾಲೋನಿ ರಮೇಶ್ ಪೂಜಾರಿ ಮತ್ತು ಕಲ್ಯಾಣಿ* ದಂಪತಿಗಳು ಮಗಳಾದ ಶೋಭಾ ಇವರ ಚಿಕಿತ್ಸೆಗೆ ರೂ.25,000 ಚೆಕ್, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಪೆರಾಡಿ ಗ್ರಾಮದ ಪಾಡಿ ಹೊಸಮನೆಯ ಹರೀಶ್ ಪೂಜಾರಿಯವರ ಪತ್ನಿ ಜಯಂತಿ ಇವರ ಚಿಕಿತ್ಸೆಗೆ ರೂ. 25,000 ಚೆಕ್ ಬೈಕ್ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದು ಚಿಕಿತ್ಸೆ ಪಡೆಯುತ್ತಿರುವ ಬಿ.ಸಿ ರೋಡ್ ತಲಪಾಡಿ ಜೋಮಾದಿಗುಡ್ಡೆಯ ಸಂಜೀವ ಕುಲಾಲ್ ಮತ್ತು ಕುಸುಮ ದಂಪತಿಗಳ ಮಗ ಅಭಿಲಾಷ್ ಇವರು ಚಿಕಿತ್ಸೆಗೆ ರೂ. 10,000 ಚೆಕ್ ಅನ್ನು *ಬರಹಗಾರ, ನಿರ್ದೇಶಕ ಕಲಾವಿದರಾದ ರಮೇಶ್ ರೈ ಕುಕ್ಕುವಳ್ಳಿ, ಆರ್ಯಭಟ್ಟ ಪ್ರಶಸ್ತಿ ಪುರಸ್ಕೃತ, ಖ್ಯಾತ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ಮತ್ತು ಶ್ರೀ ಗುರು ಫ್ರೆಂಡ್ಸ್ ಅಜಿಲಮೊಗರು ಇದರ ಅಧ್ಯಕ್ಷರಾದ ಪುರೋಹಿತ ನವೀನ್ ಶಾಂತಿ ಆಡ್ಯಾಲ್* ಇವರುಗಳ ಸಮ್ಮುಖದಲ್ಲಿ *ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ಬಿ.ಸಿ ರೋಡ್* ಇಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

More from the blog

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...