Wednesday, April 10, 2024

ಬಂಟ್ವಾಳ ತುಳುಕೂಟದ ವತಿಯಿಂದ ತುಳು ನೃತ್ಯ ಭಜನಾ ಸ್ಪರ್ಧೆ

ಬಂಟ್ವಾಳ: ಬಂಟ್ವಾಳ ತುಳುಕೂಟದ ವತಿಯಿಂದ ನ.24ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ತಾಲೂಕು ಮಟ್ಟದ ತುಳು ನೃತ್ಯ ಭಜನಾ ಸ್ಪರ್ಧೆಯನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಬುಧವಾರ ಎಲ್ .ಡಿ.ಬ್ಯಾಂಕು ಸಭಾಂಗಣದಲ್ಲಿ ತುಳುಕೂಟದ ಅಧ್ಯಕ್ಷ ಸುದರ್ಶನ್ ಜೈನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ.
ಭಜನಾ ಸ್ಪರ್ಧೆಯ ಸಂಯೋಜನೆಗಾಗಿ ಮಂಜು ವಿಟ್ಲ, ರಾಜಾ ಬಂಟ್ವಾಳ, ಅಶೋಕ ಶೆಟ್ಟಿ ಸರಪಾಡಿ, ಸೀತಾರಾಮ ಶೆಟ್ಟಿ ಕಾಂತಾಡಿಗುತ್ತು, ದಿವಾಕರದಾಸ್ ಕಾವಳಕಟ್ಟೆ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
ತುಳುವನ್ನು 8 ನೇ ಪರಿಚ್ಚೇದಕ್ಕೆ ಸೇರಿಸುವ ನಿಟ್ಟಿನಲ್ಲಿ ಮನವಿ ಸಲ್ಲಿಸಲು ನಿರ್ಧರಿಸಲಾಯಿತು. ನವಂಬರ್ 16 ರಂದು ತುಳು ಸ್ಪರ್ಧೆ:
ತುಳುಕೂಟದ ವತಿಯಿಂದ ಬಂಟ್ವಾಳ ತಾಲೂಕು ಮಟ್ಟದ ಫ್ರೌಢಶಾಲಾ ವಿದ್ಯಾರ್ಥಿಗಳಿಗೆ ನವಂಬರ್ 16 ರಂದು ಸ್ಪರ್ಶಾ ಕಲಾ ಮಂದಿರದಲ್ಲಿ ತುಳು ಕತೆ ಹೇಳುವುದು ಹಾಗೂ ತುಳು ಗಾಯನ ಸ್ಪರ್ಧೆಯನ್ನು ನಡೆಸಲು ತೀರ್ಮಾನಿಸಲಾಯಿತು. ಸ್ಪರ್ಧೆಯ ಸಂಯೋಜನೆಗಾಗಿ ಕೆ.ರಮೇಶ್ ನಾಯಕ್ ರಾಯಿ, ಗೋಪಾಲ ಅಂಚನ್, ಟಿ.ಶೇಷಪ್ಪ ಮೂಲ್ಯ, ಬಿ.ಸತೀಶ್ ಕುಮಾರ್, ಗಣೇಶ್ ನಾಯಕ್ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
ಹಿರಿಯ ಸಾಹಿತಿ, ತುಳು ಲಿಪಿ ಶಿಕ್ಷಕ ಬಿ.ತಮ್ಮಯ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮುಂದಿನ ಸಭೆಯನ್ನು ಸೆ. 30 ಸೋಮವಾರ ಸಂಜೆ 5 ಗಂಟೆಗೆ ಬಿ‌.ಸಿ‌.ರೋಡಿನ ಎಲ್.ಡಿ. ಬ್ಯಾಂಕು ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು ಎಲ್ಲಾ ಸದಸ್ಯರು ಹಾಜರಿರುವಂತೆ ಅಧ್ಯಕ್ಷ ಸುದರ್ಶನ್ ಜೈನ್ ವಿನಂತಿಸಿದರು.
ತುಳುಕೂಟದ ಕಾರ್ಯದರ್ಶಿ ಎಚ್ಕೆ. ನಯನಾಡು ಸ್ವಾಗತಿಸಿದರು. ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್ ವಂದಿಸಿದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...