ವಿಟ್ಲ: ಸ್ಥಳೀಯರ ದೂರಿನ ಹಿನ್ನಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ, ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಕಪ್ಪು ಕಲ್ಲಿನ ಕೋರೆಗಳಿಗೆ ದಾಳಿ ನಡೆಸಿ ಯಂತ್ರಗಳನ್ನು ವಶಕ್ಕೆ ಪಡೆದ ಘಟನೆ ವರಪಾದೆಯಲ್ಲಿ ನಡೆದಿದೆ.

ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವರಪಾದೆ ಭಾಗದಲ್ಲಿ ಗಣಿಗಾರಿಕೆ ನಡೆಸಲು ಯಾರೊಬ್ಬರೂ ಗಣಿ ಇಲಾಖೆಯಿಂದ ಪರವಾನಿಗೆ ಪಡೆಯದೆ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಸಲಾಗುತ್ತಿತ್ತು ಎಂಬುದು ಸ್ಥಳೀಯರು ಮಾಹಿತಿ ಕೇಳಿದ ಸಮಯ ತಿಳಿದು ಬಂದಿದೆ. ಗಣಿಗಾರಿಗೆ ನಡೆಸುತ್ತಿರುವುದರಿಂದ ಸಮಸ್ಯೆಯಾಗುವ ಬಗ್ಗೆ ಸ್ಥಳೀಯರೊಬ್ಬರು ಜಿಲ್ಲಾಡಳಿತ ಸೇರಿ ಸಂಭಂದ ಪಟ್ಟ ಇಲಾಖೆಗಳಿಗೆ ದೂರು ನೀಡಿದ್ದರು.

ಈ ದೂರಿನ ಹಿನ್ನಲೆಯಲ್ಲಿ ಅಧಿಕಾರಿಗಳ ತಂಡ ಕೆಲವು ದಿನಗಳ ಹಿಂದೆ ಬೇಟಿ ನೀಡಿ ಪರಿಶೀಲನೆಯನ್ನು ನಡೆಸಿತ್ತು. ಆದರೆ ಆ ಸಮಯದಲ್ಲಿ ಯಾವುದೇ ಕಾಮಗಾರಿ ನಡೆಯುತ್ತಿರಲಿಲ್ಲ ಎನ್ನಲಾಗಿದೆ. ಕೆಲಸ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಶುಕ್ರವಾರ ದಾಳಿಯನ್ನು ನಡೆಸಿದ್ದು, ಈ ಸಂದರ್ಭ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ 3 ಹಿಟಾಚಿ, 3 ಟಿಪ್ಪರ್, 1 ಟ್ಯಾಕ್ಟರ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಶುಕ್ರವಾರ ಸಂಜೆ ಸ್ಥಳದಿಂದ ಯಂತ್ರಗಳನ್ನು ವರ್ಗಾವಣೆ ಮಾಡಲು ಸೂಕ್ತ ವ್ಯವಸ್ಥೆ ಇಲ್ಲದ ಹಿನ್ನಲೆಯಲ್ಲಿ ಶನಿವಾರವೂ ಕಾರ್ಯಾಚರಣೆ ಮುಂದುವರಿಯಿತು. ಎಲ್ಲಾ ಯಂತ್ರಗಳ ಸರಿಯಾಗಿದ್ದರೂ, ಶುಕ್ರವಾರ ಬೆಳಗ್ಗೆ ಸಾಗಾಟ ಸಮಯ ಎಲ್ಲವೂ ಕೆಟ್ಟು ಹೋಗಿತ್ತು. ಕೆಲವು ಯಂತ್ರದ ಚಕ್ರದ ಗಾಳಿ ತೆಗೆದು ಇಡಲಾಗಿತ್ತು, ಕೆಲವು ಯಂತ್ರದ ಕೀ ಇರಲಿಲ್ಲ, ಇನ್ನು ಕೆಲವು ಯಂತ್ರದ ಉಪಕರಣಗಳಿರದೆ ಸಾಗಾಟ ಮಾಡಲು ಪರದಾಟ ಮಾಡುವ ಹಾಗಾಗಿತ್ತು. ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟು ಯಂತ್ರಗಳನ್ನು ಸ್ಥಳದಿಂದ ತಪ್ಪಿಸಿಕೊಂಡು ಹೋಗದಂತೆ ರಕ್ಷಣೆ ಮಾಡಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಿಜ್ಞಾನಿ ಮೂರ್ತಿ, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್., ಕಂದಾಯ ನಿರೀಕ್ಷಕರಾದ ದಿವಾಕರ ಮುಗುಳಿಯ, ಗ್ರಾಮಕರಣಿಕರಾದ ಪ್ರಕಾಶ್, ವಿಟ್ಲ ಪೊಲೀಸ್ ಠಾಣೆಯ ಎಸ್. ಐ. ಯಲ್ಲಪ್ಪ ಹಾಗೂ ಸಿಬ್ಬಂದಿಗಳು ದಾಳಿಯಲ್ಲಿ ದಾಳಿಯಲ್ಲಿ ಭಾಗವಹಿಸಿದರು.

ಚಿತ್ರ ಇದೆ:
ವಿಐಎಲ್_೨೮ ಸೆಪ್_೧ : ವಶಕ್ಕೆ ಪಡೆದ ಯಂತ್ರವನ್ನು ಸಾಗಾಟ ಮಾಡಲು ಮುಂದಾಗಿರುವ ಅಧಿಕಾರಿಗಳು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here