Tuesday, April 9, 2024

ಜಕ್ರಿಬೆಟ್ಟು: ಗಣೇಶನ ವಿಸರ್ಜನಾ ಶೋಭಾಯಾತ್ರೆ

ಬಂಟ್ವಾಳ : ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತ್ರತ್ವದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು ಬಂಟ್ವಾಳ ಇವರ ವತಿಯಿಂದ ಪೂಜಿಸುವ 16 ನೇ ವರ್ಷದ ಗಣೇಶನ ವಿಸರ್ಜನಾ ಶೋಭಾಯಾತ್ರೆ ಬಹಳ ಅದ್ದೂರಿಯಾಗಿ ನೆಡೆಯಿತು.

8.30 ರ ವೇಳೆ ಗಣಪನನಿಗೆ ವಿಸರ್ಜನಾ ಪೂಜೆ ನಡೆದ ಬಳಿಕ ಶೋಭಾಯಾತ್ರೆ ನಡೆಯಿತು.
ಶೋಭಾಯಾತ್ರೆಯಲ್ಲಿ ಹುಲಿ ವೇಷ, ವಿವಿಧ ಅಪಕರ್ಷಣ ಟ್ಯಾಬ್ಲೋಗಳು, ನಾಸಿಕ್ ಬ್ಯಾಂಡ್ , ತಾಲೀಮು ಮೆರವಣಿಗೆಯಲ್ಲಿ ಸಾಗಿದವು.

ದಕ್ಷ ಪ್ರಮಾಣಿಕ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರ ರಾಜೀನಾಮೆ ಬಹಳ ನೋವು ತಂದಿದೆ ಎಂದು ಮಾಜಿ ಸಚಿವ ಬಿ‌.ರಮಾನಾಥ ರೈ ಹೇಳಿದರು.
ಅವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು ಬಂಟ್ವಾಳ ಇವರ ವತಿಯಿಂದ ಪೂಜಿಸುವ 16 ನೇ ವರ್ಷದ ಗಣಪತಿ ಶೋಭಾಯಾತ್ರೆಯ ವಿಸರ್ಜನಾ ಪೂಜೆಯ ಸಭಾ ಕಾರ್ಯಕ್ರಮದ ವೇಳೆ ತಿಳಿಸಿದರು. ‌
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನದ ಪ್ರತಿಯೊಂದು ಅಂಗವೂ ಬಲಿಷ್ಠ ವಾಗಿ ಉಳಿಯಬೇಕು, ಆರ್ಥಿಕ ವ್ಯವಸ್ಥೆಯೂ ಹಾಳಾಗಬಾರದು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಅವರು ಈ ಸಂದರ್ಭದಲ್ಲಿ ಹೇಳಿದರು. ‌

More from the blog

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...