ಬಂಟ್ವಾಳ: ಪೌಷ್ಟಿಕ, ಸಾವಯವ ಕೃಷಿಗೆ ಹೆಚ್ಚಿನ ಒತ್ತುನೀಡಬೇಕಾದ ಅನಿವಾರ್ಯ ಕಾಲಘಟ್ಟದಲ್ಲಿ ನಾವಿದ್ದೇವೆ, ಸಾವಯವ ಆಹಾರದ ಮೂಲಕ ಆರೋಗ್ಯ ವಂತಾರಗಬೇಕು, ಮಹಿಳೆಯರು ಈ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಹೇಳಿದರು.

ಅವರು ಕಂದೂರು ಮಾಚಿದೇವ ಸಭಾಂಗಣದಲ್ಲಿ ನಡೆದ ತೋಟಗಾರಿಕೆ ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ 2018-19 ಸಾಲಿನ ತಾಲೂಕು ಪಂಚಾಯತ್ ಯೋಜನೆಯಡಿ ರೈತ ಮಹಿಳೆಯರಿಗೆ ಹಣ್ಣು ಮತ್ತು ತರಕಾರಿ ಸಂಸ್ಕರಣೆ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಸ್ವಾವಲಂಬಿಯಾಗಿ ಬದುಕು ನಡೆಸಲು ಸರಕಾರದ ಉತ್ತಮ ಕಾರ್ಯಕ್ರಮ ಎಂದು ಅವರು ಹೇಳಿದರು. ‌
ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿ ಮಹಿಳೆಯರು ವಿಶೇಷವಾಗಿ ಆರ್ಥಿಕ ವಾಗಿ ಸಬಲರಾಗಲು ಸರಕಾರ ಬೇರೆ ಬೇರೆ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದು ಇದರ ಸದುಪಯೋಗ ಪಡೆಯಬೇಕು ಎಂದು ಅವರು ಹೇಳಿದರು.
ಆಹಾರವೇ ಆರೋಗ್ಯವಾಗಿರುವದರಿಂದ ಬಳಕೆ ಮಾಡುವ ವಿಧಾನ ಮತ್ತು ಆಯ್ಕೆ ಸರಿಯಾಗಿರಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಜೀಪ ಮೂಡ ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಬೆಳ್ಚಾಡ ವಹಸಿ ಕಾರ್ಯಕ್ರಮ ಕ್ಕೆ ಶುಭ ಹಾರೈಸಿದರು. ಬಂಟ್ವಾಳ ತಾಲೂಕು ಮಡಿವಾಳ ಸಮಾಜಸೇವ ಸಂಘದ ಅಧ್ಯಕ್ಷ ಎನ್.ಕೆ.ಶಿವ ಸಂಪನ್ಮೂಲ ವ್ಯಕ್ತಿಯಾಗಿ ಸವಿತಾ ಭಟ್ ಅಡ್ವಾಯಿ ಅಹಾರ ತಯಾರಿಯ ಬಗ್ಗೆ ಗುಂಪಿನ ಮಹಿಳೆಯರಿಗೆ ಮಾಹಿತಿ ನೀಡಿದರು.
ಬಂಟ್ವಾಳ ಹಿರಿಯ ತೋಟಗಾರಿಕಾ ನಿರ್ದೇಶಕ ಪ್ರದೀಪ್ ಡಿ.ಸೋಜ ಪ್ರಸ್ತಾವಿಕವಾಗಿ ಮಾತನಾಡಿದರ.
ಬಂಟ್ವಾಳ ಸಹಾಯಕ ತೋಟಗಾರಿಕಾ ಅಧಿಕಾರಿ ದಿನೇಶ್ ಸ್ವಾಗತಿಸಿದರು ವಂದಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here