Sunday, April 14, 2024

ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಆಸ್ಥಾನ ವಿದ್ವಾನ್ ಗೌರವ

ಬೆಂಗಳೂರಿನ ಶ್ರೀ ಅವನಿ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂನ ಶ್ರೀ ಶಾರದಾ ಪೀಠ ವತಿಯಿಂದ ಅಕ್ಟೋಬರ್ 8ರಂದು ನಡೆಯುವ ಸಮಾರಂಭದಲ್ಲಿ ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ, ಯಕ್ಷಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಆಸ್ಥಾನ ವಿದ್ವಾನ್ ಪ್ರಶಸ್ತಿ ನೀಡಿ ಸನ್ಮಾನಿಸಲಿದೆ. ನಾನಾ ಕ್ಷೇತ್ರಗಳಲ್ಲಿ ದುಡಿದ ಒಟ್ಟ ಐವರು ಮಹನೀಯರಿಗೆ ಈ ಪ್ರಶಸ್ತಿ ದೊರಕಲಿದ್ದು, ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಕಲಾವಿದರೊಬ್ಬರಿಗೆ ಅವನಿ ಶೃಂಗೇರಿ ಪೀಠದಿಂದ ಇದೇ ಮೊದಲ ಬಾರಿಗೆ ಆಸ್ಥಾನ ವಿದ್ವಾನ್ ಬಿರುದು ನೀಡಲಾಗುತ್ತಿದೆ ಎಂದು ಮಠದ ಭಕ್ತವೃಂದದವರಾದ ಶರವೂರು ಸುಬ್ರಹ್ಮಣ್ಯ ರಾವ್ ತಿಳಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀಪುರಂನ ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ಅವನಿ ಶ್ರೀ ಶಾರದಾಪೀಠಂ ಮಠವಿದ್ದು, ಇಲ್ಲಿ ಕಾರ್ಯಕ್ರಮ ನಡೆಯಲಿದೆ. ತೆಂಕುತಿಟ್ಟಿನಲ್ಲಿ ಸುಮಾರು 60 ವರ್ಷಗಳ ಅನುಭವ ಇರುವ 71ರ ಹರೆಯದ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರು ಹಿಂದೆ ಧರ್ಮಸ್ಥಳ, ಕದ್ರಿ, ಕಟೀಲು ಸಹಿತ ನಾನಾ ಮೇಳಗಳಲ್ಲಿ ಹಿಮ್ಮೇಳವಾದಕರಾಗಿ ದುಡಿದಿದ್ದಾರೆ. ಕಳೆದ 50 ವರ್ಷಗಳಿಂದ ಅವರು ಹಿಮ್ಮೇಳ ಶಿಕ್ಷಣ ನೀಡುತ್ತಿದ್ದು, ಸಾವಿರಾರು ಶಿಷ್ಯರನ್ನು ಹೊಂದಿದ್ದಾರೆ. ಈಗಾಗಲೇ ಸುಬ್ರಹ್ಮಣ್ಯ ಭಟ್ಟರಿಗೆ ಕಸಾಪ ರಾಜ್ಯ ಸಮ್ಮೇಳನದಲ್ಲಿ ಸನ್ಮಾನ, ಜಿಲ್ಲಾ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಸಹಿತ ಹಲವು ಕಡೆಗಳಲ್ಲಿ ಸನ್ಮಾನಗಳು, ಶಿಷ್ಯರಿಂದ ಅಭಿನಂದನಾ ಕಾರ್ಯಕ್ರಮಗಳು ನಡೆದಿವೆ. ಕಳೆದ ವರ್ಷ ಮಂಗಳೂರಿನಲ್ಲಿ ಅವರ ಶಿಷ್ಯರ ಸಮಾವೇಶ ನಡೆದಿತ್ತು. ತೆಂಕುತಿಟ್ಟಿನ ಪ್ರಸಕ್ತ ಹಿಮ್ಮೇಳ ಕಲಾವಿದರ ಪೈಕಿ ಬಹುತೇಕರು ಮಾಂಬಾಡಿ ಶಿಷ್ಯರಾಗಿದ್ದು, ದ.ಕ.ಕಾಸರಗೋಡು ಅಲ್ಲದೆ ಬೆಂಗಳೂರಿನಲ್ಲೂ ಶಿಷ್ಯರಿದ್ದಾರೆ.

More from the blog

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...