ಬಂಟ್ವಾಳ: ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಪ್ರಗತಿಪರಿಶೀಲನಾ ಸಭೆ ಪಂಚಾಯತ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆಯಿತು.

ಕೆಲವು ಗ್ರಾಮ ಪಂಚಾಯತ್ ಮೆಸ್ಕಾಂ ಬಿಲ್ ಪಾವತಿಯಲ್ಲಿ ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ಸಭೆಯ ಅಧ್ಯಕ್ಷರ ಗಮನಕ್ಕೆ ಮೆಸ್ಕಾಂ ಅಧಿಕಾರಿಗಳು ತಂದರು. ‌
ಗ್ರಾಮ ಪಂಚಾಯತ್ ಗಳಿಗೆ ಮೆಸ್ಕಾಂ ಬಿಲ್ ಗಳು ಸರಿಯಾದ ಸಮಯಕ್ಕೆ ನೀಡುತ್ತಿಲ್ಲ ಎಂಬು ದೂರುಗಳಿವೆ ಇದರ ಬಗ್ಗೆ ಮೆಸ್ಕಾಂ ಅಧಿಕಾರಿಗಳು ಗಮನಹರಿಸಲು ತಾ.ಪಂ.ಅಧ್ಯಕ್ಷರು ತಿಳಿಸಿದರು. ‌

ಮಳೆಯಿಂದ ಅನೇಕ ರಸ್ತೆಗಳು ಹಾಳಾಗಿವೆ, ಗುಂಡಿಗಳು ಬಿದ್ದು ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ, ಈ ಬಗ್ಗೆ
ಇಂಜಿನಿಯರ್ ವಿಭಾಗ ಏನು ಕ್ರಮಕೈಗೊಂಡಿದೆ ಎಂದು ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ಅಧಿಕಾರಿಗಳನ್ನು ಪ್ರಶ್ನಿಸಿದರು.
ಕನಿಷ್ಟ ಪಕ್ಷ ಗುಂಡಿಗಳನ್ನು ಮುಚ್ಚುವ ತೇಪೆ ಹಾಕುವ ಕಾರ್ಯವನ್ನಾದರೂ ಶೀಘ್ರವಾಗಿ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.

ಈ ಬಗ್ಗೆ ಸಂಬಂಧಪಟ್ಟವರಿಗೆ ಲಿಖಿತವಾದ ಮಾಹಿತಿ ನೀಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದರು.
ಡೆಂಗ್ಯೂ ಸಹಿತ ಸಾಂಕ್ರಾಮಿಕ ರೋಗಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ತಾಲೂಕು ವೈದ್ಯಾಧಿಕಾರಿ ದೀಪಾ ಪ್ರಭು ಸಭೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಇಲಿ ಜ್ವರದ ಬಗ್ಗೆ ಮಾಹಿತಿ ನೀಡುವಂತೆ ಅಧ್ಯಕ್ಷರ ಕೋರಿಕೆಯ ಮೇರೆಗೆ ಇಲಿ ಜ್ವರದ ಸಂಪೂರ್ಣ ಮಾಹಿತಿಯನ್ನು ಡಾ! ದೀಪಾ ಪ್ರಭು ನೀಡಿದರು.

ಈ ಸಂದರ್ಭದಲ್ಲಿ ವೇದಿಕೆ ಯಲ್ಲಿ  ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ ಬಂಗೇರ, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here