Monday, April 15, 2024

ಲೋಕಾರ್ಪಣೆಗೆ ಸಿದ್ಧಗೊಳ್ಳುತ್ತಿರುವ ಒಡಿಯೂರು ಶ್ರೀ ಸಂಸ್ಥಾನದ ’ಶ್ರೀಹನುಮಗಂಗಾ ಪುಷ್ಕರಿಣಿ’

ಒಡಿಯೂರು: ಒಡಿಯೂರು ಶ್ರೀಗಳವರ ದಿವ್ಯ ಕಲ್ಪನಾಶಕ್ತಿಯ ಅನಾವರಣವಾಗಿ ಶ್ರೀ ಸಂಸ್ಥಾನದಲ್ಲಿ ನಿರ್ಮಾಣಗೊಂಡಿರುವ ’ಶ್ರೀಹನುಮಗಂಗಾ ಪುಷ್ಕರಿಣಿ’ ಅಕ್ಟೋಬರ 2, ಶ್ರೀ ಲಲಿತಾ ಪಂಚಮಿ ಮಹೋತ್ಸವದಂದು ಲೋಕಾರ್ಪಣೆಗೆ ಸಿದ್ಧಗೊಳ್ಳುತ್ತಿದೆ.
ಒಡಿಯೂರು ಶ್ರೀ ದತ್ತಾಂಜನೇಯ ದೇಗುಲದ ವಿಶೇಷ ಆಕರ್ಷಣೆಯಾಗಿರುವ ಶ್ರೀಹನುಮಗಂಗಾ ಪುಷ್ಕರಿಣಿ ಕಲಾತ್ಮಕವಾಗಿ ಮೂಡಿಬಂದಿದೆ. ನಿತ್ಯ ಹರಿದ್ವರ್ಣದ ರಮಣೀಯ ವನಸಿರಿ ಕಲೆಂಜಿಮಲೆಯ ಹಿನ್ನಲೆಯಲ್ಲಿ ಅಪ್ಯಾಯಮಾನವಾದ ಕಲ್ಪವೃಕ್ಷಗಳ ಮಧ್ಯದ ಪುಷ್ಕರಿಣಿಯ ಉತ್ತರಭಾಗದಲ್ಲಿ ನಿರ್ಮಿಸಿದ ವಿಶಿಷ್ಟ ಶಿಲ್ಪಕೃತಿಯಲ್ಲಿ ಶ್ರೀ ದತ್ತಗುರು ಮತ್ತು ಶ್ರೀ ಆಂಜನೇಯನ ಬಿಂಬ ದಿವ್ಯ ತೇಜಸ್ಸಿನಿಂದ ಆಕರ್ಷಿಸುತ್ತಿದೆ. ಸಮೀಪದಲ್ಲಿರುವ ಕಾಮಧೇನು, ಹನುಮ, ನವಿಲು ಮೂರ್ತಿಗಳಿಗೆ ಪ್ರಾಕೃತಿಕವಾದ ಆಕರ್ಷಣೆ ಇದೆ.
ಈ ಸುಂದರ ಶಿಲ್ಪರಚನೆಯನ್ನು ಸೂಕ್ಷ್ಮವಾಗಿ ವೀಕ್ಷಿಸಿದಾಗ ಪೂರ್ವದಲ್ಲಿ ಹನುಮ, ಪಶ್ಚಿಮದಲ್ಲಿ ಗರುಡ ಆಕೃತಿ, ಮಧ್ಯದಲ್ಲಿ ಗಣಪತಿ ಮೂಡಿದೆ.
ಶ್ರೀ ಸಂಸ್ಥಾನದಲ್ಲಿ ಸುಂದರವಾಗಿ ನಿರ್ಮಿಸಿ ’ನಿತ್ಯಾನಂದ ಗುಹೆಯಲ್ಲಿಯ ಪುಟ್ಟ ಜಲಾಶಯದಲ್ಲಿ ಆಗ್ನೇಯ ಭಾಗದಲ್ಲಿರುವ ’ಹನುಮಗಂಗೆ’ ಒರತೆ ನೇರವಾಗಿ ಶ್ರೀಹನುಮಗಂಗಾ ಪುಷ್ಕರಿಣಿಗೆ ಗೋಮುಖದ ಮೂಲಕ ಸೇರುತ್ತದೆ.

ಶ್ರೀ ಲಲಿತಾ ಪಂಚಮಿ ಮಹೋತ್ಸವ-ಶ್ರೀ ಚಂಡಿಕಾ ಮಹಾಯಾಗ:
ಅ.2ರಂದು ಶ್ರೀ ಸಂಸ್ಥಾನದಲ್ಲಿ ವಿವಿಧ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಲಲಿತಾ ಪಂಚಮಿ ಮಹೋತ್ಸವ ನಡೆಯಲಿದೆ. ಲೋಕಕಲ್ಯಾಣಾರ್ಥವಾಗಿ ಶ್ರೀ ಚಂಡಿಕಾ ಮಹಾಯಾಗವು ಜರಗಲಿದ್ದು, ಪೂರ್ವಾಹ್ಣ ದೀಪಾರಾಧನೆ, 9.30ಕ್ಕೆ ಶ್ರೀ ಚಂಡಿಕಾ ಮಹಾಯಾಗ ಆರಂಭಗೊಳ್ಳಲಿದೆ. ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಸಭಾಕಾರ್ಯಕ್ರಮ 10 ಗಂಟೆಗೆ ನಡೆಯಲಿದ್ದು ಸಾಧ್ವಿ ಶ್ರೀ ಮಾತಾನಂದಮಯೀ ಉಪಸ್ಥಿತರಿರುವರು. ಬಂಟ್ವಾಳ ಶಾಸಕ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಚಿಕ್ಕಮಗಳೂರು ಬಸವನಹಳ್ಳಿ ಠಾಣೆಯ ಸಬ್‌ಇನ್‌ಸ್ಪೆಕ್ಟರ್  ನಂದಿನಿ ಶೆಟ್ಟಿ, ಮುಂಬೈನ ಉದ್ಯಮಿ ಶ್ರೀ ವಾಮಯ್ಯ ಬಿ. ಶೆಟ್ಟಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ವಿದುಷಿ ಸಾವಿತ್ರಿ ಈಶ್ವರ ಭಟ್ ಅಮೈ, ಚಿತ್ರನಟ, ರಂಗಭೂಮಿ ಕಲಾವಿದ ಶ್ರೀ ಕಾಸರಗೋಡು ಚಿನ್ನಾ, ಯಕ್ಷಗಾನ ಹಾಸ್ಯ ಕಲಾವಿದ ಶ್ರೀ ಸೀತಾರಾಮಕುಮಾರ್ ಕಟೀಲು, ತುಳು ನಾಟಕ ರಚನೆಗಾರ, ನಿರ್ದೇಶಕ, ನಿರ್ಮಾಪಕ ಶ್ರೀ ಕೃಷ್ಣ ಜಿ. ಮಂಜೇಶ್ವರ, ಚಿತ್ರಕಲಾ ಶಿಕ್ಷಕ ಶ್ರೀ ತಾರಾನಾಥ ಕೈರಂಗಳ, ಅಬ್ಬಕ್ಕ ಟಿ.ವಿ.ಯ ಆಡಳಿತ ನಿರ್ದೇಶಕ ಶ್ರೀ ಶಶಿಧರ ಪೊಯ್ಯತ್ತಬೈಲ್ ಇವರಿಗೆ ಶ್ರಿ ಗುರುದೇವಾನುಗ್ರಹ ಪುರಸ್ಕಾರ ನೀಡಿ ಗೌರವಿಸಲಾಗುವುದು.
ಮಧ್ಯಾಹ್ನ ಶ್ರೀ ಚಂಡಿಕಾ ಮಹಾಯಾಗದ ಪುರ್ಣಾಹುತಿ, ಮಹಾಪೂಜೆ, ಮಹಾಸಂತರ್ಪಣೆ ನಡೆಯಲಿದ್ದು, 2 ಗಂಟೆಗೆ ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ’ಚಂದ್ರಾವಳಿ ವಿಲಾಸ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಸಂಜೆ 6 ಗಂಟೆಗೆ ಸಾರ್ವಜನಿಕ ಶ್ರೀ ಸ್ವಯಂವರ ಪಾರ್ವತೀ ಪೂಜೆ, ಅಷ್ಟಾವಧಾನ ಸೇವೆ, ರಾತ್ರಿ ಭದ್ರಕಾಳಿಗೆ ವಿಶೇಷ ಪೂಜೆ ನಡೆಯಲಿದೆ.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...