Wednesday, April 10, 2024

ಹೆದ್ದಾರಿ ದುರಸ್ತಿಪಡಿಸುವಂತೆ ಒತ್ತಾಯಿಸಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಸೆ.11ರಂದು ಬೃಹತ್ ಪ್ರತಿಭಟನೆ

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್ ನಿಂದ ಮಾಣಿ ಜಂಕ್ಷನ್ ತನಕ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿ ಸಾರ್ವಜನಿಕರು ತೊಂದರೆಗೊಳಾಗಾಗಿದ್ದಾರೆ ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಅಥವಾ ಸಂಭಂದಪಟ್ಟ ಅಧಿಕಾರಿಗಳಾಗಲಿ ಇದರ ಬಗ್ಗೆ ಯಾವುದೇ ರೀತಿಯ ಗಮನ ಹರಿಸದ್ದು ಖಂಡನೀಯವಾಗಿದೆ.

ಇದರ ವಿರುದ್ದ ಸರಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲು ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೇತ್ರತ್ವದಲಿ ಸೆ.11 ನೇ ಬುಧವಾರ ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಮೆಲ್ಕಾರ್ ಜಂಕ್ಷನ್‌ನಲ್ಲಿ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿದ್ದು ತದ ನಂತರ ಪಾದಯಾತ್ರೆ ಮುಖಾಂತರ ಬಿ.ಸಿ.ರೋಡ್‌ನ ಮಿನಿ ವಿಧಾನಸೌಧದಲ್ಲಿ ಗೌರವಾನ್ವಿತ ಜಿಲ್ಲಾಧಿಕಾರಿಯವರಿಗೆ ಬಂಟ್ವಾಳ ತಾಲೂಕಿನ ದಂಡಾಧಿಕಾರಿಯವರ ಮುಖಾಂತರ ಮನವಿ ಸಲ್ಲಿಸಲಾಗುವುದು. ಈ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ವಾಹನ ಮಾಲಕರು ಹಾಗೂ ಚಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...