ಮಂಗಳೂರು : ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿ, ಉತ್ತಮ ಸೇವೆ ಸಲ್ಲಿಸಿದ್ದ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಇಂದು ರಾಜೀನಾಮೆ ನೀಡಿದ್ದಾರೆ.

ತಮಿಳುನಾಡು ಮೂಲದವರಾದ ಸಸಿಕಾಂತ್ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರ್ ಪದವೀಧರರು. ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ದ.ಕ ಜಿಲ್ಲಾಧಿಕಾರಿಗೂ ಮುಂಚೆ ಇವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಸಸಿಕಾಂತ್, ತಮ್ಮ ವೈಯಕ್ತಿಕ ಕಾರಣದಿಂದಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಅರ್ಧದಲ್ಲಿಯೇ ರಾಜೀನಾಮೆ ನೀಡಿ ತೆರಳುತ್ತಿರುವುದಕ್ಕೆ, ಸಾರ್ವಜನಿಕರಲ್ಲಿ ಕ್ಷಣೆ ಯಾಚಿಸುತ್ತೇನೆ ಎಂದು ಹೇಳಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here