Friday, April 12, 2024

ಶೇಖ್ ಆದಂ ಸಾಹೇಬ್‌ರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬಂಟ್ವಾಳ : ಬಂಟ್ವಾಳ ತಾ| ಕಾವಳಪಡೂರು, ವಗ್ಗ ಸ. ಪ. ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ, ಇಂಗ್ಲಿಷ್ ಭಾಷಾ ಶಿಕ್ಷಕ ಶೇಖ್ ಆದಂ ಸಾಹೇಬ್ ನೆಲ್ಯಾಡಿ ಅವರಿಗೆ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಕಳೆದ ೨೧ ವರ್ಷಗಳಿಂದ ಶಿಕ್ಷಣ ಇಲಾಖೆಯಲ್ಲಿ ಮುಖ್ಯ ಶಿಕ್ಷಕ ಹುದ್ದೆ ಸಹಿತ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಮಕ್ಕಳು ಮತ್ತು ತಾನು ಸೇವೆ ಸಲ್ಲಿಸಿದ ಶಾಲೆಯ ಸಮಗ್ರ ಅಭಿವೃದ್ಧಿಗಾಗಿ ಹಲವಾರು ವಿನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಅವರು ಈಗಾಗಲೇ ತಮ್ಮ ಶೈಕ್ಷಣಿಕ ಸಾಧನೆಗಾಗಿ ತಮ್ಮ ಶಾಲೆಗೆ ಹಾಗೂ ತಾವು ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದಾರೆ.
ಇಂಗ್ಲಿಷ್ ಭಾಷಾ ಸ್ನಾತಕೋತ್ತರ ಪದವೀಧರರಾದ ಅವರು ೧೯೯೮ರಲ್ಲಿ ಗುರುಕಂಬಳ ಎ.ಕೆ.ಯು. ಹೆಣ್ಣುಮಕ್ಕಳ ಪಿಯು ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಶಿಕ್ಷಣ ವೃತ್ತಿ ಆರಂಭಿಸಿ ೨೦೦೪ರಿಂದ ವಗ್ಗ ಸ. ಪ್ರೌ. ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕರಾಗಿ ೨೦೧೨ರಿಂದ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಶೈಕ್ಷಣಿಕ ಕಾರ್ಯಕ್ರಮಗಳಾದ ಪ್ರತಿಭಾ ಪುರಸ್ಕಾರ,ವಲಯ ಮಟ್ಟದ ಪ್ರತಿಭಾ ಕಾರಂಜಿ, ಗೇಮ್ಸ್, ಶಾಲಾ ಬೆಳ್ಳಿ ಹಬ್ಬ, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ,ತಾ| ಮಟ್ಟದ ಸ್ಕೌಟ್ಸ್ ಗೈಡ್ಸ್ ರ್‍ಯಾಲಿ, ಆರೋಗ್ಯ ಶಿಬಿರ ಮೊದಲಾದ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ನಡೆಸಿದ್ದಾರೆ.
ಶಾಲೆಗೆ ಜಿಲ್ಲಾ ಮಟ್ಟದ ಪರಿಸರ ಮಿತ್ರ ಪ್ರಶಸ್ತಿ, ಹಳದಿ ಶಾಲೆ ಪ್ರಶಸ್ತಿ, ಕಿತ್ತಳೆ ಶಾಲೆ ಪ್ರಶಸ್ತಿ, ೨೦೧೬ ಮತ್ತು ೨೦೧೯ರಲ್ಲಿ ಎಸೆಸ್ಸೆಲ್ಸಿಯಲ್ಲಿ ಶೇ. ನೂರು ಫಲಿತಾಂಶ, ಶಿಕ್ಷಣ ಇಲಾಖೆಯಿಂದ ಉತ್ತಮ ಸಾಧನಾ ಪ್ರಶಸ್ತಿ, ಶಿಕ್ಷಣ ಮಂತ್ರಿಗಳ ಕಚೇರಿಯಿಂದ ಉತ್ತಮ ಮುಖ್ಯ ಶಿಕ್ಷಕ, ಉತ್ತಮ ಇಂಗ್ಲಿಷ್ ಭಾಷಾ ಸಾಧನಾ ಪ್ರಶಸ್ತಿ ಹಾಗೂ ಇನ್ನೂ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.
ದಾನಿಗಳ ಸಹಕಾರದಿಂದ ಶೌಚಾಲಯ, ಇಂಟರ್‌ಲಾಕ್, ಸಿಸಿ ಕ್ಯಾಮರಾ, ಶುದ್ಧೀಕರಿಸಿದ ಕುಡಿಯುವ ನೀರು, ಗೇಟ್, ಕಂಪ್ಯೂಟರ್, ಆವರಣ ಗೋಡೆ, ಸುಣ್ಣ ಬಣ್ಣ, ಬೋರ್‌ವೆಲ್, ಸೋಲಾರ್ ವ್ಯವಸ್ಥೆಯ ಸ್ಮಾರ್ಟ್ ಕ್ಲಾಸ್,ಸೌಂಡ್ ಸಿಸ್ಟಮ್, ಸಭಾಭವನ ವಿಸ್ತರಣೆ, ಬಾಲಕಿಯರ ಶೌಚಾಲಯಕ್ಕೆ ನ್ಯಾಪ್‌ಕೀನ್ ಬರ್ನರ್ ಅಳವಡಿಕೆ, ಶಾಲಾವನ, ಉತ್ತಮ ವಾಚನಾಲಯ, ಮಗು ಸ್ನೇಹಿ ವಾತಾವರಣದಿಂದ ವಗ್ಗ ಸರಕಾರಿ ಪ್ರೌಢಶಾಲೆಯ ಶಾಲೆಯ ಸಮಗ್ರ ಅಭಿವೃದ್ಧಿ ಸಾಽಸಿದ್ದಾರೆ.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...