Wednesday, April 10, 2024

ಸೆ.24-26: ರೈತರಿಗೆ ಅಧ್ಯಯನ ಶಿಬಿರ

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯ ಮಟ್ಟದ ಅಧ್ಯಯನ ಶಿಬಿರ
ಸೆ.24ರಿಂದ ಸೆ.26ರವರೆಗೆ ವಿಟ್ಲ ಸಿಪಿಸಿಆರ್‌ಐ ಸಮೀಪದ ಮಂಗಳ ಮಂಟಪದಲ್ಲಿ ನಡೆಯಲಿದೆ. ರಾಜ್ಯದ ಪ್ರತಿ ಜಿಲ್ಲೆಯ 10 ಪದಾಧಿಕಾರಿಗಳು ಹಾಗೂ ರೈತರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಕಾರ್ಯದರ್ಶಿ ಸಿ. ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ ಹೇಳಿದರು.
ಸೆ.24ರಂದು ಬೆಳಗ್ಗೆ 10.30ಕ್ಕೆ ಶಿಬಿರದ ಉದ್ಘಾಟನೆಯನ್ನು ಸಿಪಿಸಿಆರ್‌ಐ ನಿರ್ದೇಶಕ ಡಾ. ಸಿಪೊ ಜೋಷ್ ನಡೆಸಲಿದ್ದು, ಅಧ್ಯಕ್ಷತೆಯನ್ನು ರೈತ ಸಂಘ ರಾಜ್ಯಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಹಿಸಲಿದ್ದಾರೆ.
ರೈತರ ಕೃಷಿ ಅಭ್ಯುದಯಕ್ಕಾಗಿ ಹಾಗೂ ಅಡಕೆ ಬೆಳೆಗಾರರ ಹಿತಕ್ಕಾಗಿ ಶ್ರಮಿಸುತ್ತಿರುವ ಅಡಕೆ ಸಂಶೋಧಕ ಬದನಾಜೆ ಶಂಕರ ಭಟ್ ಅವರಿಗೆ ರೈತ ವಿಜ್ಞಾನ ಪುರಸ್ಕಾರ ನೀಡಲಾಗುತ್ತಿದೆ ಎಂದು ವಿಟ್ಲ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದರು.
ಜನಪರ ಚಳುವಳಿಗಳು ಮತ್ತು ಸವಾಲುಗಳು, ಬಸವಣ್ಣ ಮತ್ತು ಕಾಯಕ ಧರ್ಮ, ರೈತ ಚಳುವಳಿಯ ಮತ್ತು ವರ್ತಮಾನಗಳು, ಗಾಂಧಿ ಮತ್ತು ಗ್ರಾಮ ಸ್ವರಾಜ್ಯ, ಭಾರತದ ಆರ್ಥಿಕತೆ ಮತ್ತು ಕೃಷಿಯ ಮೇಲಿನ ಪರಿಣಾಮಗಳು, ಲೋಹಿಯಾ ಚಿಂತನೆ ಮತ್ತು ವರ್ತಮಾನದ ಭಾರತ, ಮಾಹಿತಿ ಹಕ್ಕು, ಜನರ ಹಕ್ಕು, ಅಂಬೇಡ್ಕರ್ ಚಿಂತನೆ ಮತ್ತು ಪ್ರಜಾಪ್ರಭುತ್ವ, ರೈತ ಚಳುವಳಿ ಮುಂದಿನ ಜವಾಬ್ದಾರಿಗಳು, ಸಂಘಟನೆ ಮತ್ತು ಶಿಸ್ತು, ಜವಾಬ್ದಾರಿಗಳು ಹಾಗೂ ಮುಂದಿನ ಹೋರಾಟಗಳು, ಹಸಿರು ಸೇನೆ ಮತ್ತು ರೈತ ಸಚಿವರು ಎಂಬ ವಿಚಾರದಲ್ಲಿ ಮೂರು ದಿನಗಳಲ್ಲಿ ಸುಮಾರು 9 ಗೋಷ್ಠಿಗಳನ್ನು ಇಟ್ಟುಕೊಳ್ಳಲಾಗಿದೆ ಎಂದರು.
ರೈತ ಸಂಘ ಜಿಲ್ಲಾಧ್ಯಕ್ಷ ಶ್ರೀಧರಶೆಟ್ಟಿ ಬೈಲುಗುತ್ತು ಮಾತನಾಡಿ ಸರಕಾರಗಳು ರೈತರನ್ನು ನಿರಂತರವಾಗಿ ನಿರ್ಲಕ್ಷಿಸುತ್ತಾ ಬರುತ್ತಿದೆ. ಕಳೆದ ಸಾಲಿನಲ್ಲಿ ಕೊಳೆರೋಗದಿಂದ ಸುಮಾರು 70 ಶೇಕಡಾದಷ್ಟು ಕೃಷಿ ಹಾನಿಗೊಳಗಾಗಿದ್ದು, 56 ಸಾವಿರ ಅರ್ಜಿಗಳು ಪರಿಹಾರಕ್ಕಾಗಿ ಸರಕಾರಕ್ಕೆ ಸಲ್ಲಿಸಲ್ಪಟ್ಟಿದೆ. ಹಿಂದಿನ ಜಿಲ್ಲಾಧಿಕಾರಿಗಳು 50 ಸಾವಿರ ಅರ್ಜಿಯ ಪರಿಹಾರ ವಿತರಣೆ ಮಾಡಲಾಗಿದೆ ಎಂಬ ಹೇಳಿಕೆ ನೀಡಿದ್ದರು.
ಆದರೆ ಶೇ.50ರಷ್ಟು ಮಾತ್ರ ಪರಿಹಾರ ವಿತರಣೆ ಆಗಿದ್ದು, ಉಳಿದ ಅರ್ಜಿಗಳಿಗೆ ಯಾಕೆ ಪರಿಹಾರ ಲಭಿಸಿಲ್ಲ. ಮತ್ತೆ ಬೆಳೆಗಾರರು ಅನಾವೃಷ್ಠಿಯಿಂದ ಸಂಕಷ್ಟಕ್ಕೆ ತುತ್ತಾಗಿದ್ದರೂ ಸರಕಾರ ಪರಿಹಾರ ನೀಡುವ ಕಾರ್ಯವನ್ನು ಮಾಡಲು ಮುಂದಾಗುತ್ತಿಲ್ಲ. ರೈತರ ನೈಜತೆಯನ್ನು ಅರಿಯುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಅಧ್ಯಯನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗೌರವ ಸಲಹೆಗಾರ ಮುರುವ ಮಹಾಬಲ ಭಟ್, ರೈತ ಸಂಘದ ಸುಧೀಶ್ ಭಂಡಾರಿ, ಇಸುಬು ಹಾಜರಿದ್ದರು.

More from the blog

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...