Sunday, April 7, 2024

ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘ 115 ಕೋಟಿ ವ್ಯವಹಾರ, 43ಲಕ್ಷರೂ ಲಾಭದಲ್ಲಿ: ಜಿ.ಆನಂದ

ಬಂಟ್ವಾಳ: ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘ ಪ್ರಸಕ್ತ ವರ್ಷದಲ್ಲಿ 115 ಕೋಟಿ ವ್ಯವಹಾರ ನಡೆಸಿದ್ದು, 43ಲಕ್ಷ ಲಾಭದಲ್ಲಿದೆ , ಸದಸ್ಯರಿಗೆ ಶೇ8 ಡಿವಿಡೆಂಡ್ ನೀಡುವ ಘೋಷಣೆ ಮಾಡಿದ್ದೇವೆ ಎಂದು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಿ.ಆನಂದ ಅವರು ಹೇಳಿದರು.

ಅವರು ಬಿಸಿರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಸಿ ಮಾತನಾಡಿದರು.
ಸಂಘ ಒಟ್ಟು 3590 ಸದಸ್ಯರನ್ನು ಹೊಂದಿದ್ದು, 24.60 ಕೋಟಿ ಠೇವಣಿ ಹೊಂದಿದೆ, 21.45 ಕೋಟಿ ಸಾಲ ನೀಡಿದೆ ಎಂದು ಅವರು ಹೇಳಿದರು.

ಜನರ ಆಶೋತ್ತರಗಳಿಗೆ ಸ್ಪಂದನೆ ನೀಡಿದ್ದೇವೆ, ಕೃಷಿಪತ್ತಿನ ಸಹಕಾರಿ ಸಂಘವಾದ್ದರಿಂದ ಕೃಷಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಂಘ ಸಹಕಾರ ನೀಡಿದೆ.
ಬಿಸಿರೋಡಿನ ಕೈಕಂಬ ಸ್ವಂತ ಕಟ್ಟಡದ ಉದ್ಘಾಟನೆ ಶೀಘ್ರವಾಗಿ ನಡೆಯಲಿದೆ.
ರಾಷ್ಟ್ರೀಯ ಬ್ಯಾಂಕ್ ಗೆ ಸರಿಹೊಂದುವ ರೀತಿಯಲ್ಲಿ ಕಂಪ್ಯೂಟರೀಕೃತ ಸಂಘವಾಗಿ ಬೆಳೆದಿರುವ ಈ ಬ್ಯಾಂಕ್ ಮೂಲಕ ವ್ಯವಹಾರ ಮಾಡುವಂತೆ ವಿನಂತಿಸಿದರು.
ಸದಸ್ಯರ ಸಹಕಾರದಿಂದ ಮಾತ್ರ ಯಾವುದೇ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಮಹಾಸಭೆಯಲ್ಲಿ ನಿರ್ದೇಶಕರುಗಳಾದ ಎಮ್.ಕರುಣೇಂದ್ರ ಪೂಜಾರಿ, ಮನೋಹರ ಮೂಲ್ಯ, ಕೆ.ಎನ್.ಶೇಖರ್, ಭವಾನಿಶಂಕರ್ ರಾವ್, ಕೆ.ಪ್ರಕಾಶ್, ಬಿ.ಸದಾಶಿವ ಶೆಣ್ಯೆ, ಎ.ಲಕ್ಷೀ ವಿ.ಪ್ರಭು ಮತ್ತು ಡಿ.ಸಿ.ಸಿ.ಬ್ಯಾಂಕ್ ವಲಯ ಮೇಲ್ವಿಚಾರಕ ಎಚ್.ಕೇಶವ ಕಿಣಿ ಉಪಸ್ಥಿತರಿದ್ದರು.

ಸಂಘದ ಮುಖ್ಯಕಾರ್ಯನಿರ್ವಣಾಧಿಕಾರಿ ಜಯಪ್ರಕಾಶ್ ಕಾಮತ್ ವಾರ್ಷಿಕ ವರದಿ ಮಂಡಿಸಿದರು.
ಸಂಘದ ಅಧ್ಯಕ್ಷ ಜಿ.ಆನಂದ ಸ್ವಾಗತಿಸಿ,
ಸಂಘದ ಉಪಾಧ್ಯಕ್ಷ ಮಹಾಬಲ ಶೆಟ್ಟಿ ವಂದಿಸಿದರು

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...