ಬಂಟ್ವಾಳ: ಎಂಆರ್ ಪಿಎಲ್ ಸಂಸ್ಥೆಯು CSR (Corporate Social Responsibility) ಅನುದಾನದಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಆಸ್ಪತ್ರೆಗಳಿಗೆ ನೀಡಿರುವ 4 ಹೊಸ ಅಂಬ್ಯುಲೆನ್ಸ್ ಗಳ ಲೋಕಾರ್ಪಣೆ ಕಾರ್ಯಕ್ರಮ ಬುಧವಾರ (ನಾಳೆ) ಬೆಳಿಗ್ಗೆ 10 ಗಂಟೆಗೆ ಬಂಟ್ವಾಳ ಸರಕಾರಿ ಆಸ್ಪತ್ರೆ ಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ಇನ್ನಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟನೆ ತಿಳಿಸಿದೆ.