Sunday, April 7, 2024

ಅಂತರಾಜ್ಯ ಕಳವು ಆರೋಪಿ ಬಂಧನ: ನಗರ ಠಾಣಾ ಪೋಲೀಸರ ಕಾರ್ಯಚರಣೆ

ಬಂಟ್ವಾಳ: ಬಂಟ್ವಾಳ ನಗರ ಠಾಣಾ ಪೋಲೀಸರ ಕಾರ್ಯಚರಣೆ , ಅಂತರಾಜ್ಯ ಕಳವು ಆರೋಪಿಯ ಬಂಧನ ನ್ಯಾಯಲಯಕ್ಕೆ ಹಾಜರು.
ಬಿಸಿರೋಡಿನ ನಂದಿನಿ ಮಿಲ್ಕ್ ಪಾಯಿಂಟ್ ಕಳ್ಳತನ ಮಾಡಿದ ಆರೋಪಿಯನ್ನು ಬಂಟ್ವಾಳ ಅಪರಾಧ ವಿಭಾಗದ ಪೋಲೀಸರು ಬಂಧಿಸಿದ್ದಾರೆ.
ಪುತ್ತೂರು ಸಾಲುಮರ ನಿವಾಸಿ ಯೂಸೂಪ್ ಅವರ ಪುತ್ರ ಕೆ.ಮಹಮ್ಮದ್ ಸಲಾಂ ಬಂಧಿತ ಆರೋಪಿ. ಬಂಧಿತನಿಂದ ಒಂದು ಮೋಟಾರು ಸೈಕಲ್‌, ನಗದು ಹಣ, ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಅಂದಾಜು ಮೌಲ್ಯ 60ಸಾವಿರ ಎಂದು ಪೋಲೀಸರು ತಿಳಿಸಿದ್ದಾರೆ.


ಬಿ.ಸಿ.ರೋಡಿನ ಸರ್ವೀಸ್ ರಸ್ತೆಯಲ್ಲಿರುವ ನಂದಿನಿ ಮಿಲ್ಕ್ ಪಾಯಿಂಟ್‌ ನಲ್ಲಿ ಆ.5 ರಂದು ಮುಂಜಾನೆ ವೇಳೆ ಕಳವು ನಡೆದಿತ್ತು.
ಅಲೋಶಿಯಸ್ ಡಿ.ಸೋಜ ಅವರಿಗೆ ಸೇರಿದ ನಂದಿನಿ ಮಿಲ್ಕ್ ಪಾಯಿಂಟ್ ಶಟರ್ ಮುರಿದು ಒಳಪ್ರವೇಶ ಮಾಡಿದ ಆರೋಪಿ ಕೌಂಟರ್ ನಲ್ಲಿದ್ದ ಹನ್ನೊಂದು ಸಾವಿರ ರೂ ಕಳವು ಮಾಡಿ ಪರಾರಿಯಾಗಿದ್ದ .
ಆರೋಪಿಯನ್ನು ಆ.14 ರಂದು ಸಾಯಂಕಾಲ ಮಾರ್ನಬೈಲು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಬಂಟ್ವಾಳ ನಗರ ಠಾಣಾ ಅಪರಾಧ ವಿಭಾಗದ ಪೋಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬೈಕಿನಲ್ಲಿ ಬರುತ್ತಿದ್ದ ಆರೋಪಿ ಪೋಲಿಸರನ್ನು ನೋಡಿ ತಪ್ಪಿಸಲು ನೋಡಿದಾಗ ಪೋಲೀಸರು ಈತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಕಳ್ಳತನದ ಪ್ರಕರಣಗಳು ಬೆಳಕಿಗೆ ಬಂದಿವೆ.
ಈತನ ವಿರುದ್ದ ಪುತ್ತೂರು ನಗರ ಠಾಣೆ , ಗೋವಾ ರಾಜ್ಯದ ಮಡಗಾಂವ್ ಪೋಲೀಸ್ ಠಾಣೆ, ಹಾಗೂ ಇತರ ಪೋಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.‌
ಆರೋಪಿಯನ್ನು ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಕಾರ್ಯಚರಣೆಯಲ್ಲಿ ಬಂಟ್ವಾಳ ನಗರ ಠಾಣಾ ಎಸ್.ಐ.ಚಂದ್ರಶೇಖರ್, ಅಪರಾಧ ವಿಭಾಗದ ಎಸ್.ಐ.ಸುಧಾಕರ ತೋನ್ಸೆ, ಎ.ಎಸ್.ಐ.ಸಂಜೀವ , ಎಚ್.ಸಿ.ಸುರೇಶ್ ಪಡಾರ್, ಸಿಬ್ಬಂದಿ ಗಳಾದ ಶ್ರೀಕಾಂತ್ ನಡಗೇರಿ, ಉಸ್ಮಾನ್ ವಾಲಿಕಾರ್, ಹಾಲೇಶ್ ಭಾಗವಹಿಸಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...