ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜೀಯವರ 150ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್‌ರವರು ಮಹಾತ್ಮ ಗಾಂಧೀಜೀಯವರ ಗುಣಗಾನ ಮಾಡಿದರು. ಪರಿಶಿಷ್ಟ ಜಾತಿ ಪಂಗಡದ ಮುಖಂಡದರಾದ ಜನಾರ್ದನ ಚೆಂಡ್ತಿಮರ್ ಪ್ರಸ್ತಾವನೆಗೈದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್ ಮುಖಂಡರಾದ ಮಾಯಿಲಪ್ಪ ಸಾಲಿಯಾನ್, ಜಗದೀಶ್ ಕೊಯಿಲ, ಪುರಸಭಾ ಸದಸ್ಯರಾದ ಗಂಗಾಧರ ಪೂಜಾರಿ, ಹಿರಿಯರಾದ ರಾಮಣ್ಣ ಪೂಜಾರಿ, ವೆಂಕಪ್ಪ ಪೂಜಾರಿ, ಅಮ್ಮು ಅರ್ಬಿಗುಡ್ಡೆ ಹಾಗೂ ಸದಸ್ಯರಾದ ಸಂಜೀತ್ ಪೂಜಾರಿ, ಆಸೀಫ್ ಕಾವಳಕಟ್ಟೆ, ಹಮೀದ್ ಮಾಣಿ ಉಪಸ್ಥಿತರಿದ್ದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧೀಪ್ ಕುಮಾರ್ ಶೆಟ್ಟಿ ಧನ್ಯವಾದಗೈದರು.