Saturday, April 20, 2024

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಆಯುಧ ಪೂಜೆ

ಬಂಟ್ವಾಳ: ನವರಾತ್ರಿ ಉತ್ಸವದ ಅಂಗವಾಗಿ ಬಿ ಸಿ ರೋಡು ಮಿನಿವಿಧಾನ ಸೌಧದಲ್ಲಿ ಇಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಇವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಯುಧ ಪೂಜೆ ನಡೆಯಿತು.
ಪ್ರಧಾನ ಅರ್ಚಕ ಪುರೋಹಿತ್ ರಾಘವೇಂದ್ರ ಮಯ್ಯರಬೈಲು ಇವರಿಂದ ಪೂಜಾ ವಿಧಿ ವಿಧಾನ ಕಾರ್ಯಕ್ರಮ ನಡೆಯಿತು.


ಈ ಪೂಜಾ ಕಾರ್ಯಕ್ರಮದಲ್ಲಿ ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ವಿಟ್ಲ ನಾಡಕಚೇರಿ ಉಪತಹಶೀಲ್ದಾರ್ ರವಿಶಂಕರ್ ಸಿ ಎಮ್,
ಪ್ರಭಾರ ಉಪತಹಶೀಲ್ದಾರ್ ಸೀತಾರಾಮ, ಗ್ರೆಟ್ಟಾ ಮಸ್ಕರೇಂಞಸ್, ಪ್ರಥಮ ದರ್ಜೆ ಸಹಾಯಕ ಪ್ರಸನ್ನ ಕುಮಾರ್ ಪಕ್ಕಳ, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ,
ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು, ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...

ನೇತ್ರಾವತಿ ನದಿ ತೀರದ ಕೃಷಿಕರ ಪಂಪ್ ಸೆಟ್ ಗಳ ವಿದ್ಯುತ್ ಸ್ಥಗಿತ : ರೈತರಿಂದ ಪ್ರತಿಭಟನೆ

ಬಂಟ್ವಾಳ: ದ.ಕ.ಜಿಲ್ಲಾಡಳಿತವೂ ಮಂಗಳೂರು ನಗರಕ್ಕೆ ಕುಡಿಯುವ ನೀರು ಕೊರತೆಯಾಗುತ್ತಿದೆ ಎಂದು ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ ಮಾಡಿರುವ ವಿರುದ್ಧ ರೈತರು ಬಂಟ್ವಾಳ ತಾಲೂಕು ಆಡಳಿತ ಸೌಧದ...