ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಎಸ್ಪಿ ಕಛೇರಿ ಸ್ಥಳಾಂತರದ ಬಗ್ಗೆ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ನಡೆಸಿ ಸ್ಪಷ್ಟ ತೀರ್ಮಾನ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಪಶ್ಚಿಮವಲಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.
ಜಿಲ್ಲಾ ಎಸ್ಪಿ ಕಛೇರಿ ಸ್ಥಳಾಂತರ ಬಂಟ್ವಾಳಕ್ಕೋ ಅಥವಾ ಪುತ್ತೂರಿಗೋ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತಾಗಿ ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಡೆಸುವುದಾಗಿ ತಿಳಿಸಿದರು.
ಬಂಟ್ವಾಳ ಪೊಲೀಸ್ ಠಾಣೆಯನ್ನು ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಬಂಟ್ವಾಳ ನಗರ ಹಾಗೂ ಗ್ರಾಮಾಂತರಕ್ಕೆ ಪ್ರತ್ಯೇಕ ವೃತ್ತನಿರೀಕ್ಷಕರನ್ನು ನೇಮಿಸಲಾಗುವುದು ಎಂದರು.
ಕರ್ನಾಟಕದಲ್ಲೇ ಅತ್ಯಂತ ಹೆಚ್ಚು ಪೊಲೀಸ್ ಕ್ವಾಟ್ರಸ್ ಇದ್ದು, ಶೇ.60ರಷ್ಟು ಇರುವ ಕ್ವಾಟ್ರಸ್ ಗಳ ಸಂಖ್ಯೆಯನ್ನು ಮುಂದಿನ ಮೂರುವರ್ಷಗಳಲ್ಲಿ ಶೇ.80ಕ್ಕೆ ಏರಿಸುವ ಗುರಿ ಇರಿಸಲಾಗಿದೆ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.