ಬಂಟ್ವಾಳ: ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರ ದ ರೋಗಿಗಳ ಆರೋಗ್ಯ ವಿಚಾರಿಸಿದ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ್ ಶೆಟ್ಟಿ ಕಾವು.
ಅವರು ಬುಧವಾರ ಬೆಳಿಗ್ಗೆ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಎಂ.ಆರ್.ಪಿ.ಎಲ್ ವತಿಯಿಂದ ನಾಲ್ಕು ತಾಲೂಕಿನ ಸರಕಾರಿ ಆಸ್ಪತ್ರೆ ಗಳಿಗೆ ನಾಲ್ಕು ಅಂಬ್ಯುಲೆನ್ಸ್ ಗಳನ್ನು ನೀಡುವ ಕಾರ್ಯಕ್ರಮ ದಲ್ಲಿ ಭಾಗವಹಸಿ ಬಳಿಕ ಆಸ್ಪತ್ರೆ ಯಲ್ಲಿನ ವ್ಯವಸ್ಥೆ ಗಳ ಬಗ್ಗೆ ಮಾಹಿತಿ ಪಡೆದರು, ಹಾಗೂ ಪ್ರತಿ ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ರಾದ ಎಂ.ಎಸ್.ಮಹಮ್ಮದ್, ಮಂಜುಳಾ ಮಾದವ ಮಾವೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ. ಬಂಗೇರ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪ ಪ್ರಭು ಮತ್ತಿತರರು ಉಪಸ್ಥಿತರಿದ್ದರು.