Wednesday, April 10, 2024

ಇಂದು ಪ್ರತಿಯೊಬ್ಬನೂ ತನ್ನ ಬದುಕನ್ನು ಸ್ಪರ್ಧೆಗೊಡ್ಡಬೇಕಾಗಿದೆ: ಡಾ| ವಿನ್ಸೆಂಟ್ ಕ್ರಾಸ್ತಾ

ಬಂಟ್ವಾಳ: ಆಧುನಿಕ ಜಗತ್ತು ಸ್ಪರ್ಧಾತ್ಮಕ ಜಗತ್ತಾಗಿದೆ. ಇಂದು ಪ್ರತಿಯೊಬ್ಬನೂ ತನ್ನ ಬದುಕನ್ನು ಸ್ಪರ್ಧೆಗೊಡ್ಡಬೇಕಾಗಿದೆ. ವಿದ್ಯಾರ್ಥಿ ಜೀವನದಲ್ಲೂ ಸ್ಪರ್ಧೆಯನ್ನು ಎದುರಿಸಬೇಕು. ಪಠ್ಯದಷ್ಟೇ ಮಹತ್ವನ್ನು ಪಠ್ಯೇತರ ಚಟುವಟಿಕೆಗೂ ಗಮನವನ್ನು ವಿದ್ಯಾರ್ಥಿ ನೀಡಬೇಕು. ಆಗ ಮಾತ್ರ ವ್ಯಕ್ತಿತ್ವ ವಿಕಸನವಾಗಲು ಸಾಧ್ಯ ಎಂದು ವಾಮಂಜೂರಿನ ಸಂತ ಜೋಸೆಪ್ ಇಂಜಿನಿಯರಿಂಗ್ ಕಾಲೇಜಿನ ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ| ವಿನ್ಸೆಂಟ್ ಕ್ರಾಸ್ತಾ ಹೇಳಿದರು.
ಅವರು ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನ ಸ್ಟಾರ್ ಕಾಲೇಜು ಸ್ಕೀಮ್ ಪ್ರಾಯೋಜಕತ್ವದಲ್ಲಿ ನಡೆದ ಅಂತರ್ ಕಾಲೇಜು ವಿಜ್ಞಾನ ಸಂಬಂಧಿ ವಿವಿಧ ಸ್ಪರ್ಧೆಗಳು ’ಸೈನ್ಸ್ ವಿಸ್ತಾ’ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸ್ಟಾರ್ ಕಾಲೇಜು ಸ್ಕೀಮ್‌ನ ಮಾನ್ಯತೆಯು ವಿಜ್ಞಾನ ವಿಭಾಗಗಳ ಬೆಳವಣಿಗೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತದೆ. ಜಿಲ್ಲೆಯ ಪ್ರತಿಷ್ಠಿತ ಕಾಲೇಜಾದ ಎಸ್.ವಿ.ಎಸ್ ಕಾಲೇಜಿಗೆ ಈ ಮಾನ್ಯತೆ ಪಡೆದಿರುವುದು ಗಮನಾರ್ಹ ಸಂಗತಿ. ವಿದ್ಯಾರ್ಥಿಗಳ ಜ್ಞಾನಾಭಿವೃದ್ದಿಗೆ ಇದು ಹೆಚ್ಚು ಸಹಕಾರಿ ಎಂದವರು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಉಪಪ್ರಾಂಶುಪಾಲರು ಮತ್ತು ಐಕ್ಯೂಎಸಿ ಸಂಯೋಜಕರಾದ ಡಾ| ಹೆಚ್ ಆರ್ ಸುಜಾತ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾಲೇಜಿನ ಸ್ಟಾರ್ ಕಾಲೇಜು ಸ್ಕೀಮ್‌ನ ಸಂಯೋಜಕರಾದ ಶ್ರುತಿ ವಂದಿಸಿದರು. ವಿದ್ಯಾರ್ಥಿನಿ ಶೋಭಾ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಮಾನಸ ಪ್ರಾರ್ಥಿಸಿದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...