ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ಸರಕಾರ ಯಶಸ್ವಿ ರೀತಿಯಲ್ಲಿ ನಿಭಾಯಿಸಿದ್ದು, ಸುಮಾರು ೨೫೦ ಕೋ.ರೂ.ಗಳಲ್ಲಿ ಪ್ರತಿ ಸಂತ್ರಸ್ಥ ಕುಟುಂಬಗಳಿಗೆ ೧೦ ಸಾವಿರ ರೂ.ಗಳ ತತ್‌ಕ್ಷಣದ ಪರಿಹಾರ ನೀಡಿದೆ. ಮನೆ ಕಳೆದುಕೊಂಡವರಿಗೆ ೫ ಲಕ್ಷ ರೂ. ಪರಿಹಾರ ಘೋಷಿಸಿ, ಈಗಾಗಲೇ ೫೦ ಶೇ.ಕ್ಕೂ ಅಧಿಕ ಮಂದಿಗೆ ೧ ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ. ಜತೆಗೆ ಮಧ್ಯವರ್ತಿಗಳ ಕಾಟ ತಪ್ಪಿಸಲು ಪರಿಹಾರ ಧನವನ್ನು ಚೆಕ್ಕಿನ ಬದಲು ಆರ್‌ಟಿಜಿಎಸ್ ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ದ.ಕ.ಜಿಲ್ಲೆಯ ಪ್ರವಾಹ ಸಂತ್ರಸ್ಥರ ನೆರವಿಗಾಗಿ ಈಗಾಗಲೇ ೩೫ ಕೋ.ರೂ.ಗಳನ್ನು ಜಿಲ್ಲಾಧಿಕಾರಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಅಶೋಕ್ ಹೇಳಿದರು.

ನಮ್ಮ ಸರಕಾರ ಅಚಲವಾಗಿದ್ದು, ಛಲದಿಂದ ಮುಂದಿನ ಮೂರುವರೇ ವರ್ಷಗಳ ಕಾಲ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಸರಕಾರ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ಸಚಿವ ಆರ್.ಆಶೋಕ್ ಹೇಳಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here