Friday, April 5, 2024

ಗಾಂಧಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ : ಅಬ್ಬಾಸ್ ಆಲಿ

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಭಾಲಭವನ ಸಮಿತಿ ಬಂಟ್ವಾಳ ಇವರ ಸಂಯುಕ್ತ ಆಶ್ರಯ ದಲ್ಲಿ ಗಾಂಧಿ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ ಬಿಸಿರೋಡಿನ ಸ್ತ್ರೀ ಶಕ್ತಿ ಸಭಾ ಭವನದಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ  ವಹಿಸಿದ್ದರು  ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಿ ಎಂದು
ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು.
ವಿದ್ಯಾರ್ಥಿ ಗಳ ದೇಶದ ಚರಿತ್ರೆಯನ್ನು ತಿಳಿದುಕೊಂಡು ಉತ್ತಮ ಪ್ರಜೆಗಳಾಗಿ, ಗಾಂಧಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ ಎಂದು ಅವರು ಹೇಳಿದರು.
ವಿಜೇತ ಮಕ್ಕಳಿಗೆ ಪ್ರಶಂಸನಾ ಪತ್ರನೀಡಿದ
ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ ಮಾತನಾಡಿ ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಬಹಳ ಮುಖ್ಯ ಸೋಲು,ಗೆಲುವು ಮುಖ್ಯವಲ್ಲ ಎಂದರು.
ವೇದಿಕೆಯಲ್ಲಿ ತಾ.ಪಂ.ಮುಖ್ಯಕಾರ್ಯನಿರ್ವಣಾಧಿಕಾರಿ ರಾಜಣ್ಣ , ಸಂಪನ್ಮೂಲ ವ್ಯಕ್ತಿಗಳಾದ ಮುರಳಿಕೃಷ್ಣ, ಚೆನ್ನಕೇಶವ , ಮುರಳೀಧರ್,ಮೇಲ್ವಿಚಾರಕಿ ಯರಾದ ಶಾಲಿನಿ, ನೀತಾಕುಮಾರಿ, ಸಿಂದೂ, ಇಂದಿರಾ ಉಪಸ್ಥಿತರಿದ್ದರು.
ಬಂಟ್ವಾಳ ಸಿ.ಡಿ.ಪಿ.ಒ.ಗಾಯತ್ರಿ ಕಂಬಳಿ ಪ್ರಸ್ತಾವಿಕವಾಗಿ ಮಾತನಾಡಿದರು.
ಹಿರಿಯ ಮೇಲ್ವಿಚಾರಕಿ ಉಷಾ ಸ್ವಾಗತಿಸಿದರು.
ಹಿರಿಯ ಮೇಲ್ವಿಚಾರಕಿ ಭಾರತಿಕುಂದರ್ ಕಾರ್ಯಕ್ರಮ ನಿರೂಪಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...