Friday, April 19, 2024

ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿಗೆ ಅನಿತಾ ಪಿ.ಪೂಜಾರಿ ಆಯ್ಕೆ

ಮುಂಬಯಿ: ಕರುನಾಡ ನಾಡಹಬ್ಬ ಎಂದೇ ಸುಪ್ರಸಿದ್ಧ, ವಿಶ್ವವಿಖ್ಯಾತ ಮೈಸೂರು ದಸರಾ 2019 ಸಂಭ್ರಮದಲ್ಲಿ ವಾರ್ಷಿಕವಾಗಿ ನಡೆಸಲ್ಪಡುವ ಪ್ರತಿಷ್ಠಿತ ಮೈಸೂರು ದಸರಾ ಕವಿಗೋಷ್ಠಿ-2019 ಇದರ ವಿಖ್ಯಾತ ವಿಭಾಗದ ಬೃಹನ್ಮುಂಬಯಿ ಅಲ್ಲಿನ ಹೆಸರಾಂತ ಯುವ ಕವಯತ್ರಿ, ಕಥೆಗಾರ್ತಿ, ಅಂಕಣಕಾರೆ ಅನಿತಾ ಪಿ.ಪೂಜಾರಿ ಆಯ್ಕೆಯಾಗಿದ್ದಾರೆ.

ಮೈಸೂರು ಅರಮನೆಯಲ್ಲಿ 1980ನೇ ಇಸವಿಯಿಂದಲೂ ಪ್ರತಿವರ್ಷ ಹೊಸರೂಪ ಧರಿಸಿ ವಿಭಿನ್ನ ನೆಲೆಯಲ್ಲಿ ಆಚರಣೆಗೊಳ್ಳುವ ಕವಿಗೋಷ್ಠಿಯನ್ನು ಈ ಬಾರಿ ವಿಶ್ವವಿಖ್ಯಾತ ಪಂಚಕವಿಗೋಷ್ಠಿ ಎಂದು ನಾಮಕರಣ ಗೊಳಿಸಲಾಗಿದೆ. ಇಂದು (ಅ.2 ರಿಂದ 6 ವರೆಗೆ) ಜಗನ್ಮೋಹನ ಅರಮನೆಯಲ್ಲಿ ಐದು ಕವಿಗೋಷ್ಠಿಗಳು ನಡೆಯಲಿದ್ದು, ಎಲ್ಲ ಕವಿಗಳಿಗೂ ಅರಮನೆಯ ವೇದಿಕೆಯಲ್ಲಿಯೇ ಕವನ ವಾಚಿಸುವ ಹೆಗ್ಗಳಿಕೆ ಈ ವರ್ಷದ್ದು. ವಿಶಿಷ್ಟ, ವಿಸ್ಮಿತ, ವಿಕಾಸ, ವಿನೋದ, ವಿಖ್ಯಾತ ಎಂಬ ಪಂಚಕವಿಗೋಷ್ಠಿಯಲ್ಲಿ ವಿಖ್ಯಾತ ವಿಭಾಗದ ಕವಿಗೋಷ್ಠಿಗೆ ಅನಿತಾ ಪೂಜಾರಿ ಮಂಗಳೂರು ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ವಿಶಾಲ ಕರ್ನಾಟಕದ ಸಮಗ್ರ 30 ಜಿಲ್ಲೆಗಳನ್ನು ಮತ್ತು ಸಹವರ್ತಿಗಳನ್ನು ಪ್ರತಿನಿಧಿಸುವ ವಿಖ್ಯಾತ ಕವಿಗೋಷ್ಠಿಯಲ್ಲಿ ಕವಿಗಳ ಪ್ರಬುದ್ಧತೆಗೆ ಪ್ರಾಮುಖ್ಯತೆ ನೀಡಲಾಗಿದೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ತಾಕೊಡೆ ಇಲ್ಲಿಯವರಾದ ಅನಿತಾ ಅವರು ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಬಿ.ಎ. ಪದವಿಯನ್ನು ಪಡೆದಿದ್ದಾರೆ. ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ 2019 ಮೇ ತಿಂಗಳಿನಲ್ಲಿ ನಡೆಸಿದ ಕನ್ನಡ ಎಂ.ಎ. ಪರೀಕ್ಷೆಯಲ್ಲಿ ಇವರು ಅತಿ ಹೆಚ್ಚು ಅಂಕ ಗಳಿಸಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಕವಿ, ಕಥೆಗಾರ್ತಿ, ಅಂಕಣಕಾರರಾಗಿ ಈಗಾಗಲೇ ಸಾಕಷ್ಟು ಹೆಸರು ಮಾಡಿರುವ ಉದಯೋನ್ಮುಖ ಪ್ರತಿಭೆಯಾಗಿದ್ದಾರೆ.

ಕಾಯುತ್ತಾ ಕವಿತೆ, ಅಂತರಂಗದ ಮೃದಂಗ (ಕನ್ನಡ ಕವನ ಸಂಕಲನ) ಮರಿಯಲದ ಮದಿಮಾಲ್ (ತುಳು ಕವನ ಸಂಕಲನ) ಇವರ ಪ್ರಕಟಿತ ಕೃತಿಗಳಾಗಿವೆ. ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥ ಮತ್ತು ಪ್ರಾಧ್ಯಾಪಕ ಡಾ| ಜಿ.ಎನ್ ಉಪಾಧ್ಯ ಇವರ ಮಾರ್ಗದರ್ಶನದಿಂದ ಸಿದ್ಧಪಡಿಸಿದ, ಡಾ.ಬಿ.ಜನಾರ್ದನ ಭಟ್ ಅವರ ಜೀವನ ಸಾಧನೆ ಶೋಧ ಸಂಪ್ರಬಂಧ ಈಗಾಗಲೇ ‘ಸವ್ಯಸಾಚಿ’ ಎಂಬ ಹೆಸರಿನಲ್ಲಿ ಬೆಳಕು ಕಂಡಿದೆ. ಮುಂಬಯಿ ವಿಶ್ವವಿದ್ಯಾಲಯ ಕಳೆದ ವರ್ಷ ನಡೆಸಿದ ಕನ್ನಡ ಎಂ.ಎ ಪರೀಕ್ಷೆಯಲ್ಲಿ ಅನಿತಾ ಪೂಜಾರಿ ಅವರು ಪ್ರಥಮ ರ್‍ಯಾಂಕ್ ಪ್ರಾಪ್ತಿಸಿ ಕೊಂಡಿದ್ದಾರೆ.

ಮುಂಬಯಿಯ ಹೆಸರಾಂತ ರಂಗನಟ, ಮೋಹನ್ ಮಾರ್ನಾಡ್ ಅವರ ಜೀವನ ಸಾಧನೆಯ ಹಿನ್ನೆಲೆಯಲ್ಲಿ ಕೃತಿಯೊಂದನ್ನು ರಚಿಸಿದ್ದಾರೆ. ಇವರ ಅಂತರಂಗದ ಮೃದಂಗ ಕೃತಿಗೆ ಜಗಜ್ಯೋತಿ ಕಲಾವೃಂದ (ರಿ.) ಸಂಸ್ಥೆಯಿಂದ ಶ್ರೀಮತಿ ಸುಶೀಲ ಶೆಟ್ಟಿ ಸ್ಮಾರಕ ಕಾವ್ಯ ಪ್ರಶಸ್ತಿ ಹಾಗೂ ಶಿಕಾರಿಪುರದ ಜನಸ್ಪಂದನ ಟ್ರಸ್ಟ್ (ರಿ.) ವತಿಯಿಂದ ‘ಅಲ್ಲಮ ಸಾಹಿತ್ಯ ಪ್ರಶಸ್ತಿ’ ಲಭಿಸಿದೆ. ಇವರ ಕತೆ ಕವನಗಳಿಗೆ ಹಲವಾರು ಪ್ರಶಸ್ತಿ, ಪುರಸ್ಕಾರ, ಗೌರವಗಳು ಲಭಿಸಿವೆ. ಸದ್ಯ . ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಇದರ ಕಾರ್ಯಕಾರಿ ಸಮಿತಿ ಸದಸ್ಯೆ ಮತ್ತು ಸೃಜನಾ ಲೇಖಕಿಯರ ಬಳಗ ಮುಂಬಯಿ ಇದರ ಜೊತೆ ಕೋಶಾಧಿಕಾರಿ ಆಗಿ ಶ್ರಮಿಸುತ್ತಿದ್ದಾರೆ.

More from the blog

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...

ನೇತ್ರಾವತಿ ನದಿ ತೀರದ ಕೃಷಿಕರ ಪಂಪ್ ಸೆಟ್ ಗಳ ವಿದ್ಯುತ್ ಸ್ಥಗಿತ : ರೈತರಿಂದ ಪ್ರತಿಭಟನೆ

ಬಂಟ್ವಾಳ: ದ.ಕ.ಜಿಲ್ಲಾಡಳಿತವೂ ಮಂಗಳೂರು ನಗರಕ್ಕೆ ಕುಡಿಯುವ ನೀರು ಕೊರತೆಯಾಗುತ್ತಿದೆ ಎಂದು ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ ಮಾಡಿರುವ ವಿರುದ್ಧ ರೈತರು ಬಂಟ್ವಾಳ ತಾಲೂಕು ಆಡಳಿತ ಸೌಧದ...

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...