ರಾಜ್ಯ ಗೃಹ ಸಚಿವರು ದ.ಕ.ಜಿಲ್ಲೆಗೆ ಅಗಮನ

ಬಂಟ್ವಾಳ: ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ದ.ಕ.ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ಅ. ೨೪ರಂದು ಬೆಳಗ್ಗೆ ೯ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ೧೦ಕ್ಕೆ ಬಂಟ್ವಾಳ ಐಬಿಯಲ್ಲಿ ಪಶ್ಚಿಮ ವಲಯ ಹಾಗೂ ಮಂಗಳೂರಿನ ಹಿರಿಯ ಪೋಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ.


ಮಧ್ಯಾಹ್ನ ೧ಕ್ಕೆ ಬೆಳ್ತಂಗಡಿಯ ಚಾರ್ಮಾಡಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಬಳಿಕ ಸಂಜೆ ೪ಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭದಲ್ಲಿ ಪಾಲ್ಗೊಂಡು ರಾತ್ರಿ ಮತ್ತೆ ಬೆಂಗಳೂರಿಗೆ ತೆರಳಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟನೆ ತಿಳಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here