Wednesday, April 10, 2024

ಸುಂದರ ಬದುಕಿಗೆ ಧರ್ಮದ ಅನುಷ್ಠಾನ ಅಗತ್ಯ:ಗುರುಪುರ ಶ್ರೀ

ಬಂಟ್ವಾಳ: ಸುಸಂಸ್ಕೃತ ಬದುಕು ಬೇಕಾದಲ್ಲಿ ಆಧ್ಯಾತ್ಮದ ಶಿಕ್ಷಣವೂ ಬೇಕು. ಆಧ್ಯಾತ್ಮದಿಂದ ಧರ್ಮದ ಉಳಿವು. ಸುಂದರ ಬದುಕಿಗೆ ಧರ್ಮದ ಅನುಷ್ಠಾನವಾಗಬೇಕು ಎಂದು ಗುರುಪುರ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.
ಬಂಟ್ವಾಳ ತಾ| ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸಮಿತಿ ಇದರ ಆಶ್ರಯದಲ್ಲಿ ಮೂಡುಪಡುಕೋಡಿ ಸ.ಹಿ.ಪ್ರಾ. ಶಾಲಾ ವಠಾರದಲ್ಲಿ ನಡೆದ 3ನೇ ವರ್ಷದ ಶ್ರೀ ಶಾರದಾ ಪೂಜೆಯ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.
ಬದುಕು ಪರಿಶ್ದ್ಧುವಾಗಿರಬೇಕಾದರೆ ಜ್ಞಾನ ಬೇಕು. ಶಾರದೆಯ ಆರಾಧನೆಯಿಂದ ಇಚ್ಛಾ ಶಕ್ತಿ, ಜ್ಞಾನ ಶಕ್ತಿ, ಕ್ರಿಯಾಶಕ್ತಿಯ ಉದ್ದೀಪನವಾಗುವುದು ಎಂದು ಅವರು ನುಡಿದರು.
ವಾಮದಪದವು ಸ. ಪ್ರ. ದ. ಕಾಲೇಜು ಪ್ರಾಂಶುಪಾಲ ಪ್ರೊ| ಹರಿಪ್ರಸಾದ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಗಳಲ್ಲಿ ಶಾರದೆಯ ಆರಾಧನೆ ಪುಣ್ಯ ಕಾರ್ಯವಾಗಿದ್ದು ಎಲ್ಲರನ್ನೂ ಒಗ್ಗೂಡಿಸುತ್ತದೆ ಎಂದರು.
ಗುತ್ತಿಗೆದಾರ ಮೋಹನ ಶೆಟ್ಟಿ ನರ್ವಲ್ದಡ್ಡ, ಸಮಿತಿ ಕಾರ್ಯಾಧ್ಯಕ್ಷ, ಉದ್ಯಮಿ ಹರೀಂದ್ರ ಪೈ, ಉದ್ಯಮಿಗಳಾದ ಉಮೇಶ್ ಶೆಟ್ಟಿ, ಜಯರಾಜ ಅತ್ತಾಜೆ, ಒಡಿಯೂರು ಗ್ರಾ. ವಿಕಾಸ ಯೋಜನೆ ವಿಸ್ತರಣಾಽಕಾರಿ ಸುಧಾಕರ ಅಳಿಕೆ ಶುಭ ಹಾರೈಸಿದರು. ಸಮಿತಿ ಪದಾಽಕಾರಿಗಳಾದ ರಮೇಶ್ ಗೌಡ ಸೇವಾ, ದಯಾನಂದ ಎರ್ಮೆನಾಡು, ಶ್ರೀನಿವಾಸ ಪೂಜಾರಿ, ಸುಪ್ರೀತ್ ಜೈನ್, ಪ್ರಶಾಂತ್ ದೇವಾಡಿಗ, ಹರೀಶ್ ಪೂಜಾರಿ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಾಧಕರಾದ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ನಾಯಕ್ ಕರ್ಪೆ ಅವರಿಗೆ ಶಾರದಾ ತಿಲಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಚಿತ್ರ ಕಲಾವಿದ ಚಿದಾನಂದ, ಗಾಯಕ ಉಮೇಶ್ ವಾಮದಪದವು, ಮೆಸ್ಕಾಂ ಅಭಿಯಂತರ ರಂಗಸ್ವಾಮಿ, ಸಿಬಂದಿ ವಿಜಯ ಅವರನ್ನು ಸಮ್ಮಾನಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಮಿತಿ ಅಧ್ಯಕ್ಷ ಡಾ| ರಾಮಕೃಷ್ಣ ಎಸ್. ಸ್ವಾಗತಿಸಿದರು. ಸಮಿತಿ ಗೌರವಾಧ್ಯಕ್ಷ ರಾಜೀವ ಶೆಟ್ಟಿ ಎಡ್ತೂರು ಪ್ರಸ್ತಾವಿಸಿದರು. ಗ್ರಾ.ಪಂ.ಉಪಾಧ್ಯಕ್ಷ ಶಂಕರ ಶೆಟ್ಟಿ ಬೆದ್ರಮಾರ್ ವಂದಿಸಿದರು. ಮನ್ಮಥ್ ಶೆಟ್ಟಿ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...