ವಿಟ್ಲ: ಕಡಂಬು ಹಾಲು ಉತ್ಪಾದಕರ ಸಹಕಾರ ಸಂಘದ 2018-19 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಆವರಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪ್ರದೀಪ ಗೌಡ ವಹಿಸಿದ್ದರು.
ಮಂಗಳೂರು ಒಕ್ಕೂಟದ ವಿಸ್ತರಣಾಧಿಕಾರಿ ಜಗದೀಶ ಮುಖ್ಯ ಅತಿಥಿಯಾಗಿ ಭಾಗವಹಿಸಿ ಒಕ್ಕೂಟದ ಅನುದಾನಗಳ ಮಾಹಿತಿ ನೀಡಿದರು.
ಸಂಘದ ಕಾರ್ಯದರ್ಶಿ ಸ್ವಾಗತಿಸಿ ವರದಿ ವಾಚಿಸಿದರು. ನಿರ್ದೇಶಕ ಧನಂಜಯ ವಂದಿಸಿದರು. ಕಡಂಬು ಹಾಲು ಉತ್ಪಾದಕರ ಸಹಕಾರ ಸಂಘದ ಎಲ್ಲಾ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.