Saturday, April 6, 2024

ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘದ ಉತ್ತಮ ಸಾಧನೆಗಾಗಿ ಪ್ರಶಸ್ತಿ

ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘವು ೨೦೧೮-೧೯ ನೇ ಸಾಲಿನಲ್ಲಿ ಸಾಧಿಸಿದ ಪ್ರಗತಿಯನ್ನು ಪರಿಗಣಿಸಿ ದ.ಕ.ಜಿಲ್ಲಾಕೇಂದ್ರ ಸಹಕಾರಿ ಬೇಂಕು ಲಿ, ಮಂಗಳೂರು ಇದರ ೨೦೧೮-೧೯ ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಸಂಘದಉತ್ತಮ ಸಾಧನೆಗಾಗಿ ಪ್ರಶಸ್ತಿಯನ್ನು ಪಡೆದಿರುತ್ತದೆ. ಈ ಪ್ರಶಸ್ತಿಯನ್ನು ಸಂಘದಅಧ್ಯಕ್ಷರಾದ .ಕೆ.ಪದ್ಮನಾಭ ಕೊಟ್ಟಾರಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ  ಸುರೇಶ.ಕೆರವರು ದ.ಕ.ಜಿಲ್ಲಾಕೇಂದ್ರ ಸಹಕಾರ ಬೇಂಕಿನ ಅಧ್ಯಕ್ಷರಾದ ಡಾ| ಎಂ.ಎನ್.ರಾಜೇಂದ್ರಕುಮಾರ್ ಮತ್ತು ನಿರ್ದೇಶಕರಾದ ರಾಜಾರಾಮ ಭಟ್‌ಟಿ.ಜಿ. ಇವರಿಂದ ಸ್ವೀಕರಿಸಿದರು.. ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘವು ೨೦೧೮-೧೯ ನೇ ಸಾಲಿನಲ್ಲಿರೂ ೨೧೮ ಕೋಟಿ ವ್ಯವಹಾರ ನಡೆಸಿ, ರೂ ೧.೨೫ ಕೋಟಿ ಲಾಭಗಳಿಸಿ, ಆಡಿಟ್ ವರ್ಗೀಕರಣದಲ್ಲಿ ’ಎ’ ತರಗತಿ ಹೊಂದಿರುತ್ತದೆ. ಸಂಘವು ರೂ ೩೬.೫೦ ಕೋಟಿ ಠೇವಣಿ ಸಂಗ್ರಹಿಸಿ, ತನ್ನ ಸದಸ್ಯರಿಗೆರೂ ೩೫.೮೦ ಕೋಟಿ ಸಾಲ ವಿತರಿಸಿರುತ್ತದೆ.
ಸಂಘದಉತ್ತಮ ಪ್ರಗತಿ ಹಾಗೂ ಸಾಧನೆಗಾಗಿ ದ.ಕ.ಜಿಲ್ಲಾಕೇಂದ್ರ ಸಹಕಾರಿ ಬೇಂಕು ಕಳೆದ ೪ ವರ್ಷಗಳಿಂದ ಉತ್ತಮ ಪ್ರಗತಿ ಹಾಗೂ ಅಭಿವೃದ್ಧಿ ಹೊಂದುತ್ತಿರುವ ಸಹಕಾರ ಸಂಘವೆಂದು ಗುರುತಿಸಿ ಸನ್ಮಾನ ಪ್ರಶಸ್ತಿ ಪತ್ರ ಹಾಗೂ ಫಲಕ ನೀಡಿ ಗೌರವಿಸಿದೆ.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...