ವಿಟ್ಲ: ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಕೊಳ್ನಾಡು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಸಾಲೆತ್ತೂರಿನ ನೇತ್ರಾವತಿ ಸಭಾಂಗಣದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂ.ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಕಾರ್ಯಕ್ರಮ ಉಧ್ಘಾಟಿಸಿದರು.
ಜಿ.ಪಂ.ಸದಸ್ಯ ಎಂ.ಎಸ್.ಮಹಮ್ಮದ್, ತಾ.ಪಂ.ಸದಸ್ಯ ಕುಲ್ಯಾರು ನಾರಾಯಣ ಶೆಟ್ಟಿ, ಸಾಲೆತ್ತೂರು ಪಂ.ಉಪಾಧ್ಯಕ್ಷೆ ಕಮಲ, ಕೊಳ್ನಾಡು ಪಂ.ಉಪಾಧ್ಯಕ್ಷೆ ಯಮುನಾ ಲಕ್ಷ್ಮಣ ಗೌಡ, ತೋಟಗಾರಿಕಾ ಇಲಾಖೆಯ ನಿರ್ದೇಶಕರು ಮತ್ತು ಸಿಡಿಪಿಒ ಸುಧಾ ಜೋಷಿ ಉಪಸ್ಥಿತರಿದ್ದರು.
ಪೋಷಣಾ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ನೋಂದಣಿಯಾಗಿರುವ ಗರ್ಭಿಣಿ ಫಲಾನುಭವಿಗಳನ್ನು ಗುರುತಿಸಿ ಹಣ್ಣು ಹಂಪಲು ನೀಡುವ ಮೂಲಕ ಗೌರವಿಸಲಾಯಿತು.
ಇದೇ ಸಂದರ್ಭ ಸೇವಾನಿವೃತ್ತಿಯಾಗಲಿರುವ ಅಂಗನವಾಡಿ ಕಾರ್ಯಕರ್ತೆ ಶ್ರೀದೇವಿ ನೂಜಿಬೈಲು ಅವರನ್ನು ಸನ್ಮಾನಿಸಲಾಯಿತು. ತೋಟಗಾರಿಕಾ ಇಲಾಖೆಯ ವತಿಯಿಂದ ಲಾಭದಾಯಕ ಅಣಬೆ ಕೃಷಿಯ ಬಗ್ಗೆ ತರಬೇತಿ ನೀಡಲಾಯಿತು.
ವಲಯ ಮೇಲ್ವಿಚಾರಕಿ ರೇಣುಕಾ ಸ್ವಾಗತಿಸಿದರು. ಪಿಡಿಒ ರೋಹಿಣಿ ವಂದಿಸಿದರು.