Wednesday, April 10, 2024

ಪ್ರಾಂತ ಮತ್ತು ಕ್ಷೇತ್ರ ಮಟ್ಟದಜ್ಞಾನ ವಿಜ್ಞಾನ ಮೇಳ

ಪ್ರಾಂತ ಮತ್ತು ಕ್ಷೇತ್ರ ಮಟ್ಟದ ಜ್ಞಾನ ವಿಜ್ಞಾನ ಮೇಳ ಸ್ಪರ್ಧೆಯು ಜಯಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ಶಾಲೆ ಬೆಂಗಳೂರು ಇಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಾಂತ(ರಾಜ್ಯ)ಮಟ್ಟದ ಸಂಸ್ಕೃತಿಜ್ಞಾನ ರಸಪ್ರಶ್ನೆಯಲ್ಲಿ ದೀಕ್ಷಿತ್, ಶ್ರೀನಿವಾಸ ಮತ್ತು ಭೂಷಣ್, ಕಥಾಕಥನ ಸ್ಪರ್ಧೆಯಲ್ಲಿ ಅಕ್ಷತಾಲಕ್ಷ್ಮೀ, ವಿಜ್ಞಾನ ಪ್ರಯೋಗದಲ್ಲಿ ಶ್ರಮಿಕ ಪ್ರಥಮ ಸ್ಥಾನ ಪಡೆದು ಕ್ಷೇತ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿಜ್ಞಾನ ಮಾದರಿಯಲ್ಲಿ ಕುಶಿ ಎ ಪೂಜಾರಿ ಮತ್ತು ಅನಘ ಯು ವಿ ಭಟ್, ಗಣಿತ ಮಾದರಿಯಲ್ಲಿ ಚೇತನಾ, ವೇದಗಣಿತ ರಸಪ್ರಶ್ನೆಯಲ್ಲಿ ಚಿನ್ಮಯಿ, ಆಶಿಕಾ ಮತ್ತು ವಾಸವಿ ತೃತೀಯ ಸ್ಥಾನ ಗಳಿಸಿರುತ್ತಾರೆ.
ದಕ್ಷಿಣಮಧ್ಯಕ್ಷೇತ್ರ ಮಟ್ಟದ ಸಂಸ್ಕೃತಿ ಜ್ಞಾನ ರಸಪ್ರಶ್ನೆಯಲ್ಲಿ 7ನೇ ತರಗತಿಯ ದೀಕ್ಷಿತ್ ಹಾಗೂ ಶ್ರೀನಿವಾಸ, ೬6ನೇ ತರಗತಿಯ ಭೂಷಣ್ ದ್ವಿತೀಯ ಸ್ಥಾನ ಪಡೆದು ಶಾಲೆಯಕೀರ್ತಿಯನ್ನು ಹೆಚ್ಚಿಸಿರುತ್ತಾರೆ. ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದರು.

More from the blog

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...