Monday, October 23, 2023

ಕುಕ್ಕಿಪಾಡಿ ಗ್ರಾಮ ಪಂಚಾಯತ್ ವಲಯ ಮಟ್ಟದ ಪಂಚಾಯತ್ ಮಿಲನ -2019

Must read

ಬಂಟ್ವಾಳ:  ವಿಧಾನಸಭಾ ಕ್ಷೇತ್ರದ ಕುಕ್ಕಿಪಾಡಿ ಗ್ರಾಮ ಪಂಚಾಯತ್ ವಲಯ ಮಟ್ಟದ ಪಂಚಾಯತ್ ಮಿಲನ 2019 ಕಾರ್ಯಕ್ರಮ ಮಾಡಮೆ ಮಿನೇಜಸ್ ನಿವಾಸದಲ್ಲಿ ಜರುಗಿತು. ಕಾರ್ಯಕ್ರಮವನ್ನು ಮಾಜಿ ಸಚಿವ ಬಿ ರಮಾನಾಥ ರೈ ಅವರು ಉದ್ಘಾಟಿಸಿ ಕಾರ್ಯಕರ್ತರು ಶಿಸ್ತಿಗೆ ಹೆಚ್ಚು ಪ್ರಾಮುಖ್ಯತೆಯನ್ನು ಕೊಟ್ಟು ಯಾವುದೇ ರೀತಿಯ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಒಗ್ಗಟ್ಟಿನಿಂದ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕಾಗಿದೆ ಹಾಗೂ ಮುಂಬರುವ ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರ ವಿಜಯಕ್ಕೆ ಹಿರಿಯರು ಹಾಗೂ ಯುವ ಜನಾಂಗ ಒಟ್ಟಾಗಿ ಶ್ರಮಿಸೋಣ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಅಧ್ಯಕ್ಷತೆ ವಹಿಸಿ ವಲಯ ಕಾಂಗ್ರೆಸ್ ಹಾಗೂ ಬೂತ್ ಸಮಿತಿಯನ್ನು ಪುನರ್‌ರಚಿಸಿ ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲು ಕಾರ್ಯಕರ್ತರಿಂದ ಸಲಹೆ ಸೂಚನೆಯನ್ನು ಪಡೆದು ಕಾರ್ಯರೂಪಿಸುವುದಾಗಿ ತಿಳಿಸಿದರು. ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಆದ ಸೋಲಿನ ಬಗ್ಗೆ ಪರಾಮವರ್ಶಿಸಿದರು. ಕಾರ್ಯಕರ್ತರ ಕಷ್ಟ ಸುಃಖವನ್ನು ಅರಿತುಕೊಂಡು ಪಕ್ಷವನ್ನು ಸಂಘಟಿಸುವುದಾಗಿ ತಿಳಿಸಿದರು. ಕುಕ್ಕಿಪಾಡಿ ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷರನ್ನಾಗಿ ಸುರೇಶ್ ಶೆಟ್ಟಿ ಇವರನ್ನು ಆಯ್ಕೆ ಮಾಡಲಾಯಿತು ಬೂತ್ ಸಮಿತಿ ಅಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ, ಸೀತಾರಾಮ್ ಶಾಂತಿ, ಸುಧೀಂದ್ರ ಶೆಟ್ಟಿ, ಉಮೇಶ್ ಶೆಟ್ಟಿ ಕೊನೆರೊಟ್ಟು ಮತ್ತು ವಲಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಂಧೀಪ್ ಹಲಾಯಿ ಹಾಗೂ ಮಹಿಳಾ ಅಧ್ಯಕ್ಷರಾಗಿ ಪ್ರೇಮಲ್ ಬಾಂಚ್ಲ್ ಡಿಸೋಜ ಇವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಪಂಚಾಯತ್ ಸದಸ್ಯರಾದ ಬಿ.ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಮಾಜಿ ಅಕ್ರಮ ಸಕ್ರಮ ಅಧ್ಯಕ್ಷರಾದ ಮಾಯಿಲಪ್ಪ ಸಾಲಿಯಾನ್, ಮುಖಂಡರಾದ ಜಗದೀಶ್ ಕೊಯಿಲ, ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ದಿನೇಶ್ ಸುಂದರ್ ಶಾಂತಿ ಸ್ವಾಗತಿಸಿ ಕುಕ್ಕಿಪಾಡಿ ತಿಮ್ಮಪ್ಪ ಪೂಜಾರಿ ವಂದನಾರ್ಪಣೆಗೈದರು.

More articles

Latest article