Friday, April 5, 2024

ವಿರೋಧ ಪಕ್ಷದವರ ಅಪಪ್ರಾಚಾರಕ್ಕೆ ಪ್ರತ್ಯುತ್ತರ ನೀಡುವಂತೆ ರೈ’ ಕರೆ

ಪಂಜಿಕಲ್ಲು ಗ್ರಾಮ ಪಂಚಾಯತ್ ವಲಯದ ಪಂಚಾಯತ್ ಮಿಲನ 2019 ಕಾರ್ಯಕ್ರಮ ಆಚಾರಿ ಪಲ್ಕೆ ಜಂಕ್ಷನ್‌ನಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕರ್ತರು ಪಕ್ಷದ ಘಣತೆಯನ್ನು ಕಾಪಾಡುವ ಮುಖಾಂತರ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ವಿರೋಧ ಪಕ್ಷದವರ ಅಪಪ್ರಚಾರಕ್ಕೆ ಪ್ರತ್ಯುತ್ತರ ನೀಡುವ ಮುಖಾಂತರ ಜವಾಬ್ದಾರಿಯುತವಾಗಿ ಕಾರ್ಯಗತಗೊಳ್ಳುವಂತೆ ಆದೇಶಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಕಾರ್ಯಕರ್ತರಿಂದ ಸಲಹೆ ಸೂಚನೆಗಳನ್ನು ಸ್ವೀಕರಿಸಿ ಪಕ್ಷದಲ್ಲಿ ಶಿಸ್ತಿಗೆ ಹೆಚ್ಚು ಪ್ರಾಮುಖ್ಯತೆಯನ್ನು ಕೊಟ್ಟು ಒಗ್ಗಟ್ಟಿನಿಂದ ಪಕ್ಷದ ಬಲವರ್ಧನೆಗೆ ಒತ್ತು ನೀಡುವಂತೆ ಕರೆಯಿತ್ತರು. ಕಾರ್ಯಕರ್ತರು ತಮ್ಮ ವೈಯ್ಯಕ್ತಿಕ ವರ್ಚ್ಚಸ್ಸನ್ನು ವೃಧ್ದಿಸುವ ಮುಖಾಂತರ ಪಕ್ಷಕ್ಕೆ ಶಕ್ತಿ ನೀಡುವಂತೆ ವಿನಂತಿಸಿದರು. ವಲಯ ಹಾಗೂ ಬೂತ್ ಸಮಿತಿಯನ್ನು ಪುನರ್‌ರಚಿಸಿ ಪಂಚಾಯತ್ ಸಮಿತಿ ಅಧ್ಯಕ್ಷರನ್ನಾಗಿ ಸದಾನಂದ ಶೆಟ್ಟಿ ಯವರನ್ನು ಆಯ್ಕೆ ಮಾಡಲಾಯಿತು. ವಲಯ ಪ್ರದಾನ ಕಾರ್ಯದರ್ಶಿಯಾಗಿ ದೇವಪ್ಪ ಕುಲಾಲ್, ಬೂತ್ ಸಮಿತಿ ಅಧ್ಯಕ್ಷರಾಗಿ ಲೋಕಯ್ಯ ಪೂಜಾರಿ, ನೇಮಿರಾಜ್ ಕಡಂಬ, ರವಿ ಪೂಜಾರಿ, ವಿಕ್ಟರ್ ಪಾಯ್ಸ್, ಸುರೇಶ್ ಜೊರಾ, ಹಾಗೂ ವಲಯ ಯುವಕಾಂಗ್ರೆಸ್ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ, ಮಹಿಳಾ ಅಧ್ಯಕ್ಷರಾಗಿ ವಸಂತಿ ಕುಲಾಲ್ ಇವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಪಂಚಾಯತ್ ಸದ್ಯಸರಾದ ಚಂದ್ರಪ್ರಕಾಶ್ ಶೆಟ್ಟಿ, ಭೂ ಅಬಿವೃಧ್ದಿ ಬ್ಯಾಂಕ್ ಅಧ್ಯಕ್ಷರಾದ ಸುದರ್ಶನ್ ಜೈನ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಜಗದೀಶ್ ಕೊಯಿಲ, ಮಾಜಿ ಅಕ್ರಮ ಸಕ್ರಮ ಅಧ್ಯಕ್ಷರಾದ ಮಾಯಿಲಪ್ಪ ಸಾಲ್ಯನ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಮುಖಂಡರಾದ ಅಶೋಕ್ ಮೈರನ್‌ಪಾದೆ, ಪಂಚಾಯತ್ ಸಧ್ಯಸರಾದ ವಿಶ್ವನಾಥ ಶೆಟ್ಟಿ, ಜಯಶ್ರೀ, ಪಕ್ಷದ ಮುಖಂಡರು ಹಾಗೂ ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿಧ್ದರು. ದೇವಪ್ಪ ಕುಲಾಲ್ ಸ್ವಾಗತಿಸಿ ರಾಜೇಶ್ ಗೌಡ ಧನ್ಯವಾದವಿತ್ತರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...