Sunday, April 21, 2024

ಪಾಂಗಲ್ಪಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಬೆಳ್ಳಿ ಹಬ್ಬ ಅ.27: ಕೆಸರ್‌ಡ್ ಒಂಜಿ ದಿನ

ಬಂಟ್ವಾಳ: ಬಂಟ್ವಾಳ ತಾ. ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸೇವಾ ಸಮಿತಿಯ ಬೆಳ್ಳಿಹಬ್ಬದ ಪ್ರಯುಕ್ತ ಕೆಸರ್‌ಡ್ ಒಂಜಿ ದಿನ ವಿವಿಧ ಆಟೋಟ ಸ್ಪರ್ಧೆ ಕಾರ್ಯಕ್ರಮ ಅ.27ರಂದು ಮೂಡುಪಡುಕೋಡಿ ಸಿರಿಗುಂಡದಪಾಡಿ ಶ್ರೀ ಬ್ರಹ್ಮ ಲಿಂಗೇಶ್ವರ ದೇವಸ್ಥಾನದ ಬಳಿಯ ಗದ್ದೆಯಲ್ಲಿ ನಡೆಯಲಿದೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ ಅವರು ಅಧ್ಯಕ್ಷತೆ ವಹಿಸುವರು. ಸಂಜೆ ಸಮಾರೋಪದಲ್ಲಿ ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅಧ್ಯಕ್ಷತೆ ವಹಿಸಲಿರುವರು. ಜ್ಯೋತಿಷ ವಿದ್ವಾನ್ ರಾಘವೇಂದ್ರ ಭಟ್ ಕೊಡಂಬೆಟ್ಟು ಬಹುಮಾನ ವಿತರಿಸಲಿರುವರು.
ಕಾರ್ಯಕ್ರಮದಲ್ಲಿ ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಹಗ್ಗ ಜಗ್ಗಾಟ, ವಾಲಿಬಾಲ್, ಕಬಡ್ಡಿ ಹಾಗೂ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ಕೆ.ಲಕ್ಷ್ಮೀ ನಾರಾಯಣ ಉಡುಪ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಆದಿತ್ಯವಾರ ಬಂಟ್ವಾಳ ತಾಲೂಕು ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು. ತಹಶೀಲ್ದಾರ್ ಅರ್ಚನಾ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು...

ಪಾದಚಾರಿಗೆ ಬೈಕ್ ಡಿಕ್ಕಿ : ವ್ಯಕ್ತಿ ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ಮಧ್ಯೆ ತುಂಬೆ ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ...

ಕಾಡಿನಲ್ಲಿ ಕೊಳೆತ ತಲೆಬುರುಡೆ, ಚೀಲ ಪತ್ತೆ

ಸುಳ್ಯ: ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಏ. 19 ರಂದು ಕಾಡಿನಿಂದ...

ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಎಸ್.ಎಂ. ಮುಹಮ್ಮದ್ ಅಲಿ ಯವರಿಗೆ ಅಭಿನಂದನೆ

ಬಂಟ್ವಾಳ : ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಪೂರ್ವಾದ್ಯಕ್ಷ ಎಸ್.ಎಂ. ಮುಹಮ್ಮದ್ ಅಲಿ ಶಾಂತಿ ಅಂಗಡಿ ಅವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು. ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ರಶೀದ್...