Saturday, April 6, 2024

ತೆಲಂಗಾಣ ಶಾಸಕ ಪೊಳಲಿ ದೇವಳಕ್ಕೆ ಭೇಟಿ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ತೆಲಂಗಾಣದ ನಾರಾಯಣ್ಪೇಟ ಶಾಸಕ ಎಸ್ ಆರ್ ರೆಡ್ಡಿ ಅವರು ಕುಟುಂಬ ಸಮೇತರಾಗಿ ಪೊಳಲಿ ದೇವಳಕ್ಕೆ ಬಂದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ದೇವಳದ ಅರ್ಚಕ ಪರಮೇಶ್ವರ ಭಟ್ ಪ್ರಸಾದ ನೀಡಿದರು. ರಾಯಚೂರು ನವೋದಯ ಮೆಡಿಕಲ್ ಕಾಲೇಜು ಚೇರ್‍ಮೆನ್ ಶಾಸಕ ಎಸ್ ಆರ್ ರೆಡ್ಡಿ ಅವರೊಂದಿಗೆ ಅವರ ಧರ್ಮಪತ್ನಿ ಸ್ವಾತಿ ರೆಡ್ಡಿ ಮಗ ಅಮೃತ್ ರೆಡ್ಡಿ ಹಾಗೂ ಮೋಹನ್ ರೆಡ್ಡಿ, ಜಯರಾಜ್, ಬಸವರಾಜ್ ಇದ್ದರು.

More from the blog

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...