ಬಂಟ್ವಾಳ: ಆಧುನಿಕ ತಂತ್ರಜ್ಞಾನ ಹಾಗೂ ಮಾಧ್ಯಮಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಅವಕಾಶಗಳನ್ನು ಒದಗಿಸಿಕೊಟ್ಟಿದೆ. ವಿದ್ಯಾರ್ಥಿಗಳು ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಪಾಣೆಮಂಗಳೂರು ಶಾರದಾ ಪ್ರೌಢಶಾಲೆ ಹಾಗೂ ಎಸ್‌ಎಲ್‌ಎನ್‌ಪಿ ವಿದ್ಯಾಲಯದ ಸಹಯೋಗದಲ್ಲಿ ಶುಕ್ರವಾರ ಆರಂಭಗೊಂಡ ಎರಡು ದಿನಗಳ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ-2019 ವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿಭಾ ಕಾರಂಜಿ ಪ್ರತಿಭಾನ್ವೇಷಣೆಯ ಕಾರ್ಯದಲ್ಲಿ ಯಶಸ್ಸು ಕಾಣಲಿ ಎಂದವರು ಶುಭಹಾರೈಸಿದರು.
ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಕಲೋತ್ಸವ ಉದ್ಘಾಟಿಸಿದರು. ಅವರು ಮಾತನಾಡಿ, ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾಕಾರಂಜಿಯಂತಹಾ ಕಾರ್ಯಕ್ರಮಗಳು ಪ್ರೇರಣೆಯಾಗಬೇಕು ಹಾಗೂ ಎಲ್ಲಾ ಪ್ರತಿಭೆಗಳು ಸಮಾಜದ ಶಕ್ತಿಯಾಗಿ ಬೆಳೆಯಲು ವಿದ್ಯಾರ್ಥಿಗಳು ಇಚ್ಛಾಶಕ್ತಿ ಯನ್ನು ಬೆಳೆಸಿಕೊಳ್ಳುವಂತೆ ಅವರು ಕರೆ ನೀಡಿದರು.
ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಜಿ.ಪಂ.ಸದಸ್ಯರಾದ ರವೀಂದ್ರ ಕಂಬಳಿ, ಮಂಜುಳಾ ಮಾಧವ ಮಾವೆ, ಚಂದ್ರಪ್ರಕಾಶ ಶೆಟ್ಟಿ, ಮಮತಾ ಗಟ್ಟಿ,
ಪುರಸಭಾ ಸದಸ್ಯ ಅಬೂಬಕರ್ ಸಿದ್ದೀಕ್, ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಶಾರದಾ ಪ್ರೌಢಶಾಲೆಯ ಸಂಚಾಲಕ ವೇದಮೂರ್ತಿ ಎಂ.ಜನಾರ್ಧನ ವಾಸುದೇವ ಭಟ್, ಎಸ್.ಎಲ್.ಎನ್.ಪಿ. ವಿದ್ಯಾಲಯದ ಸಂಚಾಲಕ ಸುಬೋದ್ ಜಿ.ಪ್ರಭು, ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್,ಯುವಜನ ಸಬಲೀಕರಣ ಕ್ರೀಡಾಧಿಕಾರಿ ನವೀನ್ ಪಿ.ಎಸ್, ವಿವಿಧ ಶಿಕ್ಷಕ ಸಂಘಟನೆಗಳ ಪ್ರಮುಖರಾದ ಶಿವಪ್ರಸಾದ್ ಶೆಟ್ಟಿ, ಜೋಯಲ್ ಲೋಬೋ, ಬಿ.ಕೆ.ಭಂಡಾರಿ, ಮುರಳಿಧರ, ಚಿನ್ನಪ್ಪ, ಸುಬ್ರಾಯ ಕಾಮತ್, ಶಾರದಾ ಪ್ರೌಢಶಾಲಾ ಮುಖ್ಯಗುರು ಭೋಜ, ಎಸ್.ಎಲ್.ಎನ್.ಪಿ. ಮುಖ್ಯ ಶಿಕ್ಷಕಿ ರಮಾ ಬ.ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಸ್ವಾಗತಿಸಿದರು, ನೋಡಲ್ ಅಧಿಕಾರಿ ಸುಶೀಲಾ ವಂದಿಸಿದರು.
ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಎರಡು ದಿನಗಳ ಕಾಲ ನಡೆಯಲಿರುವ ಕಲೋತ್ಸವದಲ್ಲಿ 25ಕ್ಕೂ ಅಧಿಕ ಸ್ಪರ್ಧೆಗಳು ನಡೆಯಲಿದ್ದು, ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 2500ಕ್ಕೂ ಅಧಿಕ ವಿದ್ಯಾರ್ಥಿಗಳು ಕಲೋತ್ಸವದಲ್ಲಿ ಭಾಗವಹಿಸುತ್ತಿದ್ದಾರೆ.
ಇದೇ ಸಂದರ್ಭ ತಾಲೂಕು ಪಂಚಾಯತ್ ವತಿಯಿಂದ ಕ್ರೀಡಾ ವಿದ್ಯಾರ್ಥಿ ಗಳಿಗೆ ನೀಡಲಾದ ಸಮವಸ್ತ್ರ ವನ್ನು ಅನಾವರಣಗೊಳಿಸಲಾಯಿತು.