ಬಂಟ್ವಾಳ: ಅರಬಿ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ಕೇರಳ, ಕರ್ನಾಟಕ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ನೆಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆ ಸೂಚನೆ ನೀಡಿರುವಂತೆ ಕರಾವಳಿಯಲ್ಲಿ ಹಿಂಗಾರು ಮಳೆ ಗುರುವಾರ ಮತ್ತಷ್ಟು ಬಿರುಸುಗೊಂಡಿದೆ. ಬೆಳಗ್ಗೆಯಿಂದಲೇ ದ.ಕ., ಕಾಸರಗೋಡು ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ.