ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಬಿ.ಸಿ.ರೋಡಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲಿಗಳೇ ಮೇಳೈಸಿತು.
ಸ್ವಚ್ಛಭಾರತದ ಪರಿಕಲ್ಪನೆಯಡಿ ಪ್ಲಾಸ್ಟಿಕ್ ಬಳಕೆ ಯನ್ನು ನಿಷೇಧಿಸಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದು, ದೇಶದಾದ್ಯಂತ ಸಂಚಲನಕ್ಕೆ ಕಾರಣವಾಗಿದೆ.ಆದರೆ ಸರ್ಕಾರಿ ಇಲಾಖೆಯೊಂದು ಸರ್ಕಾರಿ ಆಚರಣಾ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಸಭಿಕರಿಗೆ ನೀರು ಒದಗಿಸಿದ್ದು ಚರ್ಚೆಗೆ ಗ್ರಾಸವಾಗಿದೆ