ಬಂಟ್ವಾಳ: ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ತಾ.ಪಂ.ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಿತು.
ಇಲಾಖೆಯ ಮುಂದಿರುವ ಮಾಸಿಕ ಗುರಿಗಳನ್ನು ಸಮಯಕ್ಕೆ ಸರಿಯಾಗಿ ತಲುಪುವಂತೆ ಅಧ್ಯಕ್ಷ ಕರ್ಕೇರ ಅಧಿಕಾರಿಗಳಿಗೆ ತಿಳಿಸಿದರು.
ಉಪಾಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿ ಜನರಿಗೆ ಅಗತ್ಯವಿರುವ ಹೊಸಹೊಸ ಕಾರ್ಯಕ್ರಮ ಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಎಲ್ಲಾ ಇಲಾಖಾ ಅಧಿಕಾರಿಗಳು ಮಾಸಿಕ ವರದಿ ನೀಡಿದರು. ತಾ.ಪಂ.ಮುಖ್ಯಕಾರ್ಯನಿರ್ವಣಾಧಿಕಾರಿ ರಾಜಣ್ಣ ಸ್ವಾಗತಿಸಿ ವಂದಿಸಿದರು.