Saturday, April 13, 2024

ತುಳು ಪ್ರತಿಭಾ ಪುರಸ್ಕಾರ ನಾಳೆ

ಉಜಿರೆ: ಮಂಗಳೂರಿನ ತುಳುಕೂಟದ ಆಶ್ರಯದಲ್ಲಿ ತುಳು ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭವು ಶನಿವಾರ ಗುರುವಾಯನಕೆರೆಯಲ್ಲಿರುವ  ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಲಿದೆ ಎಂದು ಶಾಲಾ ಮುಖ್ಯೋಪಾಧ್ಯಾಯ ಜಗನ್ನಾಥ ಮತ್ತು ತುಳುಕೂಟದ ಕಾರ್ಯದರ್ಶಿ ರತ್ನಕುಮಾರ್ ಎಂ. ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿಗರಿಷ್ಠ ಅಂಕ ಪಡೆದ ಗುರುವಾಯನಕೆರೆ ಸರ್ಕಾರಿ ಪ್ರೌಢ ಶಾಲೆಯ ಕುಮಾರಿ ತೇಜಸ್ವಿನಿ ಕೆ.ಮತ್ತು ಪಿ.ಯು.ಸಿ.ಯಲ್ಲಿ ಗರಿಷ್ಠ ಅಂಕ ಪಡೆದ ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವಕಾಲೇಜಿನ ಮನೀಶ್ ಶ್ರೀರಾಮ್ ಅವರಿಗೆ ತುಳು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.
ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷಆರ್.ಯನ್. ಪೂವಣಿ ಕಾರ್ಯಕ್ರಮ ಉದ್ಘಾಟಿಸುವರು.
ಮಂಗಳೂರು ತುಳುಕೂಟದ ಅಧ್ಯಕ್ಷ ಬಿ.ದಾಮೋದರ ನಿಸರ್ಗ ಅಧ್ಯಕ್ಷತೆ ವಹಿಸುವರು.
ಉಜಿರೆಎಸ್.ಡಿ.ಎಂ. ಕಾಲೇಜಿನ ಉಪನ್ಯಾಸಕ ಡಾ.ದಿವಾ ಕೊಕ್ಕಡ ಮತ್ತು ಶಾಲಾ ಮುಖ್ಯ ಶಿಕ್ಷಕ ಜಗನ್ನಾಥ ಶುಭಾಶಂಸನೆ ಮಾಡುವರು.

More from the blog

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...