ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನೀಡಲಾದ ಉಚಿತ ಬೈಸಿಕಲ್‌ಗಳನ್ನು ವಿತರಿಸಲಾಯಿತು.
ದ. ಕ. ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೋಡಂದೂರು ಅವರು ಪೋಷಕರ ಸಮಕ್ಷಮದಲ್ಲಿ ಬೈಸಿಕಲ್‌ಗಳನ್ನು ವಿತರಿಸಿದರು. ಕೇಪು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಶಾಲಾ ಆಡಳಿತ ಮಂಡಳಿ ಸದಸ್ಯ ಅಬ್ದುಲ್ ಕರೀಮ್ ಕುದ್ದುಪದವು, ವಾರ್ಡ್ ಸದಸ್ಯರಾದ ಸುಮಿತ್ರಾ ಹಾಗೂ ಮಾಲತಿ, ಜನತಾ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಡಿ. ಶ್ರೀನಿವಾಸ್, ಶಿಕ್ಷಕ ವೃಂದದ ಉದಯಕೃ? ಭಟ್, ಗೀತಾಕುಮಾರಿ ಹಾಗೂ ಕುಸುಮಾವತಿ ಉಪಸ್ಥಿತರಿದ್ದರು.
ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ. ಆರ್. ನಾಯ್ಕ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಕನ್ನಡ ಅಧ್ಯಾಪಕ ಶಿವಕುಮಾರ ಸಾಯ ವಂದಿಸಿದರು.