ಪುಂಜಾಲಕಟ್ಟೆ: ಅಕ್ರಮವಾಗಿ ಮಧ್ಯದ ಬಾಟಲಿಗಳನ್ನು ಸಾಗಿಸುತ್ತಿದ್ದ ವಾಹನ ಸಹಿತ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಟ್ವಾಳ ತಾಲೂಕು, ಮೂಡುಪಡುಕೋಡಿ ಗ್ರಾಮದ ನೇರಳಕಟ್ಟೆ ಎಂಬಲ್ಲಿ ಪೋಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.
ನೈನಾಡು ಸಮೀಪದ ಅನನ್ಯ ಇರ್ವತ್ತೂರು ಪದವು ನಿವಾಸಿ ಬಾಲಕೃಷ್ಣ ಶೆಟ್ಟಿ ಬಂಧಿತ ಆರೋಪಿ.
ಬಂಧಿತನಿಂದ 1.32.780 ಲಕ್ಷ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪುಂಜಾಲಕಟ್ಟೆ ಎಸ್.ಐ.ಸೌಮ್ಯ ಅವರು ರೌಂಡ್ಸ್ ಕರ್ತವ್ಯದಲ್ಲಿರುವ ಸಮಯ ಮೂಡುಪಡುಕೋಡಿ ಗ್ರಾಮದ ನೇರಳಕಟ್ಟೆ ಎಂಬಲ್ಲಿ ಮಂಗಳವಾರ ರಾತ್ರಿ ಸುಮಾರು 6.30 ಗಂಟೆಗೆ ಮೂರ್ಜೆ ಕಡೆಗೆ ಹೋಗುತ್ತಿದ್ದ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಕಾರಿನಲ್ಲಿ ರೂ 2880 ಮೌಲ್ಯದ 180 ಎಮ್ ಎಲ್ ನ ಮೈಸೂರು ಲ್ಯಾನ್ಸರ್ ವಿಸ್ಕಿ ಯ 48 ಮದ್ಯದ ಬಾಟ್ಲಿಗಳು ಮತ್ತು ರೂ 2880 ಮೌಲ್ಯದ 90 ಎಮ್ ಎಲ್ ನ ಮೈಸೂರು ಲ್ಯಾನ್ಸರ್ ನ 96 ಸ್ಯಾಚೆಟ್ ಗಳು ಇದ್ದು ಆರೋಪಿಯು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯವನ್ನು ಸಾಗಾಟ ಮಾಡುತ್ತಿರುವುದು ಖಚಿತಪಟ್ಟಿರುವುದರಿಂದ ಮದ್ಯವನ್ನು ಮತ್ತು ಸಾಗಾಟ ಮಾಡಲು ಉಪಯೋಗಿಸಿದ ಕಾರನ್ನು ವಶಕ್ಕೆ ಪಡೆದು ಆರೋಪಿತನ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗಿದೆ.