ಬಂಟ್ವಾಳ: ಇರಾ ಗ್ರಾಮ ಪಂಚಾಯತ್ ಅಧ್ಯಕ್ಷನ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಇರಾ ಗ್ರಾಮ ಪಂಚಾಯತ್ ನ ಅಧ್ಯಕ್ಷ ರಝಾಕ್ ಕುಕ್ಕಾಜೆ ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.

ರಝಾಕ್ ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಮಂಚಿ ಗ್ರಾಮದ ಮಂಚಿ ಕಟ್ಟೆಯಲ್ಲಿರುವ ಕಿನಿಕ್ ವೊಂದಕ್ಕೆ ಇಂದು ರಾತ್ರಿ ಬಂದಿದ್ದರು ಎನ್ನಲಾಗಿದೆ‌. ಈ ವೇಳೆ ಕ್ಲಿನಿಕ್ ನಲ್ಲಿದ್ದ ರಝಾಕ್ ಅವರ ಮೇಲೆ ಬೈಕ್ ನಲ್ಲಿ ಬಂದ ಮೂವರಿದ್ದ ತಂಡ ಮಾರಕಾಸ್ತ್ರ ಗಳಿಂದ ಹಲ್ಲೆ ನಡೆಸಿದೆ ಎನ್ನಲಾಗಿದೆ‌. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರನ್ನು ಕಂಡ ತಂಡ ಸ್ಥಳದಿಂದ ಪರಾರಿಯಾಗಿದೆ. ಘಟನೆಯಿಂದ ರಝಾಕ್ ಅವರ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡ ಹೋಗಲಾಗಿದೆ‌.ಘಟನಾ ಸ್ಥಳದಲ್ಲಿ ಕೂತೂಹಲಿಗರು ಜಮಾಯಿಸಿದ್ದಾರೆ.ಮಸೀದಿ ಹಾಗೂ ವೈಯಕ್ತಿಕ ವಿಚಾರದಲ್ಲಿ ಈ ಹಲ್ಲೆ ನಡೆದಿದೆ ಎಂದು ಹೇಳಲಾಗುತತಿದೆ

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here