ನವದೆಹಲಿ: ಅಯೋಧ್ಯೆ ತೀರ್ಪನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್, ನ್ಯಾಯಮೂರ್ತಿ ಎಸ್‍ಎ ಬೋಬ್ಡೆ, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಪೀಠ ಬೆಳಗ್ಗೆ 10.30ಕ್ಕೆ ತನ್ನ ತೀರ್ಪನ್ನು ಪ್ರಕಟಿಸಿದೆ.
ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್‌ ನಿಂದ ‘ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಅಯೋಧ್ಯೆಯಲ್ಲಿ ರಾಮ ಮಂದಿರನ್ನು ಕಟ್ಟುವ ಕೆಲಸವನ್ನು ಸರಕಾರಕ್ಕೆ ನೀಡಿದೆ.
ಆಗಸ್ಟ್ 6 ರಿಂದ ಸುಪ್ರೀಂ ಕೋಟ್ ದಿನನಿತ್ಯ ವಿಚಾರಣೆಯನ್ನು ಆರಂಭ ಮಾಡಿತ್ತು. 40 ದಿನಗಳ ಕಾಲ ನಿರಂತರ ವಿಚಾರಣೆ ನಡೆಸಿದ ಸಂವಿಧಾನ ಪೀಠ ಅಕ್ಟೋಬರ್ 16ಕ್ಕೆ ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ಆದೇಶ ಕಾಯ್ದಿರಿಸಿತ್ತು. ಸುಪ್ರೀಂ ಕೋರ್ಟ್ ಅಯೋಧ್ಯೆ ವಿವಾದವನ್ನು ಪರಿಹರಿಸಿಕೊಳ್ಳಲು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಫ್‍ ಎಂ ಐ ಕಲಿಫುಲ್ಲಾ, ಧರ್ಮಗುರು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಹಾಗೂ ಹಿರಿಯ ವಕೀಲ ಶ್ರೀರಾಮ್ ಮಂಚು ಅವರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಆದರೆ ಈ ವಿವಾದವನ್ನು ಬಗೆಹರಿಸಲು ಸಮಿತಿ ವಿಫಲವಾದ ಹಿನ್ನೆಲೆಯಲ್ಲಿ ಸಂವಿಧಾನ ಪೀಠ ದಿನನಿತ್ಯ ವಿಚಾರಣೆ ನಡೆಸಿತ್ತು.
ನ್ಯಾಯಾಪೀಠ ಇಂದು ಏನು ಹೇಳಿತು?
2010ರಲ್ಲಿ ಅಲಹಾಬಾದ್ ಕೋರ್ಟ್ ತೀರ್ಪೆನು?
ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಜಾಗ ಸಮಾನ ಹಂಚಿಕೆ ಮಾಡಿತ್ತು. ವಿವಾದಿತ 2.77 ಎಕರೆಗ ಭೂಮಿ 3 ಭಾಗಗಳಾಗಿ ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ, ರಾಮ್‍ಲಲ್ಲಾಗೆ ಸಮಾನ ಹಂಚಿಕೆ ಮಾಡಿತ್ತು.

ಬಹುತೇಕ ರಾಜ್ಯಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ತೀರ್ಪು ಏನೇ ಬಂದರೂ ಸರಿ ಶಾಂತಿ, ಸಂಯಮದಿಂದ ಇರಬೇಕು. ಯಾವುದೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ರಾಜ್ಯದಲ್ಲೂ ಸಹ ಖಾಕಿ ಪಡೆ ಅಲರ್ಟ್​ ಆಗಿದ್ದು ಕೊಡ ಎಲ್ಲ ಜಿಲ್ಲೆಗಳಲ್ಲೂ ಸೂಕ್ತ ಭದ್ರತೆ ಒದಗಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲೂ ಸಹ ಪ್ರಚೋದನಾತ್ಮಕ ಪೋಸ್ಟ್​ಗಳನ್ನು ಹಾಕಬಾರದು ಎಂದು ಆಯಾ ಜಿಲ್ಲಾಧಿಕಾರಿಗಳು ಕಡಕ್​ ಸೂಚನೆ ನೀಡಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here