ಬಂಟ್ವಾಳ: ಅಯೋಧ್ಯೆ ತೀರ್ಪ, ಟಿಪ್ಪು ಜಯಂತಿ ಹಾಗೂ ಈದ್ ಮಿಲಾದ್ ಈ ಮೂರು ಪ್ರಮುಖ ಅಂಶಗಳನ್ನೊಳಗೊಂಡ ಕಾರ್ಯಕ್ರಮಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೂರ್ವಭಾವಿಯಾಗಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಲಕ್ಮೀಪ್ರಸಾದ್ ಅವರು ಬಂಟ್ವಾಳ ಎ.ಎಸ್.ಪಿ.ಕಚೇರಿಯಲ್ಲಿ ವಿಶೇಷ ಮಹತ್ವದ ಸಭೆ ನಡೆಸಿ ಕಟ್ಟೆಚ್ಚರ ವಹಿಸಲು ಸೂಚಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಬಂಟ್ವಾಳ ವೃತ್ತಕ್ಕೆ ಸಂಬಂಧಿಸಿದಂತೆ ಯಾವ ರೀತಿಯಲ್ಲಿ ಕಾನೂನು ಕ್ರಮಗಳನ್ನು ನಿರ್ದಾಕ್ಷಿಣ್ಯವಾಗಿ ತೆಗೆದುಕೊಳ್ಳಬೇಕು ಎಂಬುದನ್ನು ಸುದೀರ್ಘವಾಗಿ ಮತ್ತು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿ ತೀರ್ಮಾನಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.


ಅಲ್ಲದೆ ಬಂಟ್ವಾಳ ವೃತ್ತನಿರೀಕ್ಷಕರ ವ್ಯಾಪ್ತಿಗೆ ಬರುವ ಬಂಟ್ವಾಳ ನಗರ ಪೋಲೀಸ್ ಠಾಣೆ, ಗ್ರಾಮಾಂತರ ಪೋಲೀಸ್ ಠಾಣೆ, ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಹಾಗೂ ವಿಟ್ಲ ಪೋಲೀಸ್ ಠಾಣಾ ಸಿಬ್ಬಂದಿ ಗಳಿಗೆ ಮೊಡಂಕಾಪು ಮತ್ತು ಬಂಟ್ವಾಳ ಎಸ್.ವಿ.ಎಸ್.ಶಾಲಾ ಅಂಗಳದಲ್ಲಿ ಮಾಬ್ ಆಪರೇಷನ್ ಮತ್ತು ಕ್ರೌಡ್ ಕಂಟ್ರೋಲ್ ನ ಬಗ್ಗೆ ವಿಶೇಷ ತರಬೇತಿ ನೀಡಲಾಯಿತು. ‌
ವೃತ್ತದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಲಾಟಿ ಮಾಬ್ ಆಪರೇಷನ್ ಹಾಗೂ ಟಿಜಿ ಗನ್, ಗ್ರನೇಡ್ಸ್ ಉಪಯೋಗಿಸುವ ಬಗೆಯನ್ನು ಡಿ.ಎ.ಆರ್.ಆರ್.ಪಿ.ಐ ನಾರಾಯಣ ಅವರು ತಿಳಿಸಿದ್ದಾರೆ.
ಬಂಟ್ವಾಳ ತಾಲೂಕಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದರೆ ನಿಯಂತ್ರಣ ಸಾಧಿಸಲು ಎಲ್ಲಾ ರೀತಿಯಾಗಿ ಸರ್ವಸನ್ನದ್ದವಾಗಿದೆ ಎಂಬುದು ಈ ತಾಲೀಮು ಸಾಕ್ಷಿಯಾಗಿತ್ತು ಎಂಬ ಮಾಹಿತಿ ತಿಳಿದು ಬಂದಿದೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರ ವಿಶೇಷ ಮುತುವರ್ಜಿಯಿಂದ ಸಭೆ ನಡೆಸಿ ತರಬೇತಿ ನೀಡಲಾಗಿದೆ, ಜೊತೆಗೆ ಅವರೇ ಖುದ್ದಾಗಿ ಪರಿಶೀಲನೆ ಕೂಡಾ ನಡೆಸಿದ್ದಾರೆ ಎಂಬ ಮಾಹಿತಿ ಕೂಡಾ ಇದೆ.
ಈ ಸಂದರ್ಭದಲ್ಲಿ ಬಂಟ್ವಾಳ ಎ.ಎಸ್.ಪಿ.ಸೈದುಲು ಅಡಾವತ್, ವೃತ್ತ ನಿರೀಕ್ಷಕ ಟಿ.ಟಿ.ನಾಗರಾಜ್, ನಗರ ಠಾಣಾ ಎಸ್.ಐ.ಚಂದ್ರಶೇಖರ್, ಗ್ರಾಮಾಂತರ ಠಾಣಾ ಎಸ್. ಐ.ಪ್ರಸನ್ನ , ವಿಟ್ಲ ಠಾಣಾ ಎಸ್. ಐ. ಯಲ್ಲಪ್ಪ, ಮೆಲ್ಕಾರ್ ಟ್ರಾಫಿಕ್ ಠಾಣಾ ಎಸ್. ಐ. ರಾಮನಾಯ್ಕ್ ಅವರು ಜೊತೆಯಲ್ಲಿ ದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here