Saturday, April 6, 2024

ಸಿದ್ದಕಟ್ಟೆ ಪದವಿ ಪೂರ್ವ ಕಾಲೇಜು ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ 1ಕೋಟಿ ರೂ : ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳ:  ಬಂಟ್ವಾಳ ತಾಲೂಕು ಸಿದ್ದಕಟ್ಟೆ ಪದವಿ ಪೂರ್ವ ಕಾಲೇಜಿಗೆ ಅತ್ಯವಶಕವಾಗಿರುವ ಹೆಚ್ಚುವರಿ ಕೊಠಡಿ, ಪ್ರಯೋಗಾಲಯ ಕೋಠಡಿ, ಶೌಚಾಲಯ ಸಮೇತ ಒಟ್ಟಿಗೆ 1 ಕೋಟಿ ರೂ ಸರಕಾರದಿಂದ ಮಂಜೂರಾತಿಯಾಗಿ ಕಾಮಗಾರಿ ಲೋಕೋಪಯೋಗಿ ಇಲಾಖೆಯಲ್ಲಿ ಟೆಂಡರ್ ಹಂತದಲ್ಲಿ ಇದ್ದು ಈ ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ಎಂದು ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷರು ಹಾಗೂ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಹೇಳಿದರು.
ಅವರು ಸಿದ್ದಕಟ್ಟೆ ಪದವಿ ಪೂರ್ವ ಕಾಲೇಜಿನ 2019-20ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತಿ ಆಗಲಿರುವ ಉಪನ್ಯಾಸಕಿ ವಸಂತಿ ವಿ ರವರ ಸಮ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರು ಪ್ರಭಾಕರ ಪ್ರಭು ಮಾತನಾಡಿ ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದ್ದು ಯುವಜನತೆಯ ನಿರ್ಮಾಣ ಕಾಲೇಜಿನ ಕ್ಯಾಂಪಸ್‌ನಲ್ಲಿ ಆಗುತ್ತಿದೆ. ಜಾತಿ ಮತ ಭೇದವಿಲ್ಲದೆ ಯುವ ಜನತೆ ವಿದ್ಯೆಯೇ ಜಾತಿ ಎಂದೂ ಮನಗಂಡು, ರಾಷ್ಟ್ರ ಪ್ರೇಮದೊಂದಿಗೆ ಧನಾತ್ಮಕವಾಗಿ ಮುಂದುವರಿದಾಗ ಭಾರತ ದೇಶ ಜಗತಿಗೆ ಮಾದರಿಯಾಗಲಿದೆ ಎಂದರು. ಇದೇ ಸಂಧರ್ಭದಲ್ಲಿ ನಿವೃತ್ತಿಯಾಗಲಿರುವ ಉಪಾನ್ಯಾಸಕಿ ವಸಂತಿ ವಿ ರವರನ್ನು ಶಾಸಕರು ಸಮ್ಮಾನಿಸಿ ಶುಭ ಹಾರೈಸಿದರು.
ಕಾಲೇಜಿಗೆ ಸಹಕಾರ ನೀಡಿದ ಸಮಿತಿ ಸದಸ್ಯರಾದ ಹೇಮಚಂದ್ರ ಗೌಡ, ನೋಣಯ್ಯ ಶೆಟ್ಟಿಗಾರ್ ಮತ್ತು 2018-19ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ 100ಕ್ಕೆ 100 ಅಂಕಗಳಿಸಿ ಸರಕಾರಿ ಕಾಲೇಜು ಮಟ್ಟದಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿಕೊಟ್ಟ 6 ವಿಧ್ಯಾರ್ಥಿಗಳನ್ನು ಶಾಸಕರು ಶಾಲು ಹೊಂದಿಸಿ ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರು ಉದಯ ಕುಮಾರ್ ವರದಿ ವಚನ ಮಾಡಿ ಸನ್ಮಾನಿತರ ಬಗ್ಗೆ ಅನುಭವ ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಗುಲಾಬಿ ಶೆಟ್ಟಿ, ನಿವೃತ್ತ ಪ್ರಾಂಶುಪಾಲರು ಪದ್ಮನಾಭ ರೈ, ಮಾಜಿ ಎಪಿಎಂಸಿ ಸದಸ್ಯ ರತ್ನ ಕುಮಾರ್ ಚೌಟ, ಗ್ರಾ.ಪಂ.ಸದಸ್ಯರಾದ ಎಸ್.ಪಿ.ಶ್ರೀಧರ್, ಬೇಬಿ ಪೂಜಾರ್ರ್‍ಇ, ಪದವಿ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಂದೇಶ್ ಶೆಟ್ಟಿ, ನಿವೃತ್ತ ಶಿಕ್ಷಕರಾದ ಕೆ.ನಾರಾಯಣ ನಾಯಕ್, ಗೋವಿಂದ ಭಟ್, ಕಾಲೇಜಿ ಅಭಿವೃದ್ಧಿ ಸಮಿತಿಯ ಸದಸ್ಯರಾದ ಪ್ರಪುಲ್ಲ ರೈ, ಸುದೀಪ್ ಕುಮಾರ್ ಜೈನ್, ಮಂದರತಿ ಎಸ್.ಶೆಟ್ಟಿ, ವಸಂತಿ ಶೆಟ್ಟಿ ಅಚ್ಯುತ ಆಚಾರ್ಯ, ರಾಜೇಂದ್ರ ನೆಟ್ಲಾಜೆ, ಯೋಗೀಶ್ ಕರ್ಪೆ, ಸೀತಾರಾಮ ಶೆಟ್ಟಿ, ಉಮನಾಥ ನಾಯಕ್, ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಉಮೇಶ್ ಗೌಡ, ಕೊಯಿಲ ಪ್ರೌಢ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು, ಉಮೇಶ್ ಅರಳ, ವಿದ್ಯಾರ್ಥಿ ನಾಯಕ ಪವನ್‌ರಾಜ್ ಉಪಸ್ಥಿತರಿದ್ದರು.
ಹಿರಿಯ ಉಪನ್ಯಾಸಕ ಶ್ರೀನಿವಾಸ ನಾಯಕ್ ಸ್ವಾಗತಿಸಿದರು. ಉಪನ್ಯಾಸಕ ಸಂಜಯ್ ಬಿ.ಎಸ್. ಕಾರ್ಯಕ್ರಮ ನಿರ್ವಹಿಸಿ, ಉಪನ್ಯಾಸಕ ಶೀನಪ್ಪ ಎನ್ ಧನ್ಯವಾದ ಹೇಳಿದರು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...